Andolana originals

ಓದುಗರ ಪತ್ರ: ನಾರಾಯಣಸ್ವಾಮಿಯವರು ಜವಾಬ್ದಾರಿಯುತವಾಗಿ ವರ್ತಿಸಲಿ

ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಖಾತೆಗೆ ವರ್ಗಾವಣೆ ಮಾಡಿಸಿದ್ದಾರೆ. ಹೀಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಕ್ಕಾಗಿ ಅವರು ಕುಂಟುತ್ತಿದ್ದಾರೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿಯವರು ಹೇಳಿಕೆ ನೀಡಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದ ಹಣ ಬೇರೆ ಖಾತೆಗಳಿಗೆ ವರ್ಗಾವಣೆಯಾಗುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಂಡಿನೋವು ಕಾಣಿಸಿಕೊಂಡಿರುವುದಕ್ಕೂ ಏನು ಸಂಬಂಧ? ಜವಾಬ್ದಾರಿಯುತ ಸ್ಥಾನದಲ್ಲಿರುವ ನಾರಾಯಣಸ್ವಾಮಿಯವರಿಗೆ ಯಾವುದನ್ನು ಯಾವುದಕ್ಕೆ ಹೋಲಿಸಿ ಮಾತನಾಡಬೇಕು ಎಂಬ ಕನಿಷ್ಠ ಜ್ಞಾನವಾದರೂ ಬೇಡವೇ? ಈಗ ವ್ಹೀಲ್‌ಚೇರ್‌ನಲ್ಲಿ ಓಡಾಡುತ್ತಿರುವ ಸಿದ್ದರಾಮಯ್ಯನವರಿಗೆ ಮುಂದಿನ ದಿನಗಳಲ್ಲಿ ಬೇರೆಯೇ ಚೇರ್ ಬರಲಿದೆ ಎಂದು ಹೇಳಿರುವುದು ನಾರಾಯಣಸ್ವಾಮಿಯವರ ಕೆಟ್ಟ ಮನಃಸ್ಥಿತಿಯನ್ನು ತೋರಿಸುತ್ತದೆ. ಅವರು ಯಾರನ್ನು ಮೆಚ್ಚಿಸಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೋ ತಿಳಿಯದು. ಆದರೆ ಇಂತಹ ಹೇಳಿಕೆಗಳು ಅವರ ಘನತೆಯನ್ನು ಕುಗ್ಗಿಸುತ್ತವೆ. ಮುಂದಾದರೂ ಅವರು ಜವಾಬ್ದಾರಿಯುತವಾಗಿ ವರ್ತಿಸುವುದನ್ನು ಕಲಿಯಲಿ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

36 mins ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

1 hour ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

2 hours ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

2 hours ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

2 hours ago

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

3 hours ago