ಇತ್ತೀಚೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿರುವ ಜತೆಗೆ ಗೊಂದಲ ಮೂಡಿಸುವಂತಹ ಪ್ರಶ್ನೆಗಳು ಹೆಚ್ಚಾಗುತ್ತಿದ್ದು, ಪರೀಕ್ಷಾರ್ಥಿಗಳನ್ನು ಗೊಂದಲಕ್ಕೀಡು ಮಾಡುತ್ತಿದೆ. ಪ್ರತಿಬಾರಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆದಾಗ ಪ್ರಶ್ನೆ ಪತ್ರಿಕೆಯ ಸೋರಿಕೆಯಿಂದಾಗಿ ಅನೇಕ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ. ಈ ಬಗ್ಗೆ ಹೋರಾಟಗಳು ನಡೆದರೂ ಅಭ್ಯರ್ಥಿಗಳಿಗೆ ನ್ಯಾಯ ದೊರಕುವುದು ದೂರದ ಮಾತು. ಇದು ಕೇವಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮಾತ್ರವಲ್ಲ. ಸಾಕಷ್ಟು ಬಾರಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದನ್ನು, ವಿದ್ಯಾರ್ಥಿಗಳಿಗೆ ಗೊಂದಲ ಮೂಡಿಸುವ ಪ್ರಶ್ನೆಗಳಿರುವುದನ್ನು ನೋಡಿದ್ದೇವೆ. ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸುವಂತಹ ಶಿಕ್ಷಕರು ಅಥವಾ ಸಂಸ್ಥೆಯವರು ಯಾವುದೇ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸುವಾಗ ವಿದ್ಯಾರ್ಥಿ ಹಾಗೂ ಅಭ್ಯರ್ಥಿಗಳಿಗೆ ಗೊಂದಲ ಮೂಡಿಸುವ ಪ್ರಶ್ನೆಗಳನ್ನು ರಚಿಸದೆ, ಪ್ರಶ್ನೆಗಳನ್ನು ಸರಳವಾಗಿ ಅರ್ಥವಾಗುವಂತೆ ರಚಿಸಬೇಕು. ಅಲ್ಲದೆ ಪ್ರಶ್ನೆ ಪತ್ರಿಕೆಗಳು ಯಾವುದೇ ಕಾರಣಕ್ಕೂ ಸೋರಿಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಆಗ ಮಾತ್ರ ಪರೀಕ್ಷೆ ನಡೆಸುವ ಮೇಲೆ ವಿಶ್ವಾಸ ಮೂಡಲು ಸಾಧ್ಯ.
-ಬಿ.ಟಿ.ಅಂಬಿಕಾ, ಹಾಸನ.





