Andolana originals

ಓದುಗರ ಪತ್ರ: ಸ್ಪರ್ಧಾತ್ಮಕ ಪರೀಕ್ಷೆಗಳು ವಿಶ್ವಾಸಾರ್ಹವಾಗಿರಲಿ

ಇತ್ತೀಚೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿರುವ ಜತೆಗೆ ಗೊಂದಲ ಮೂಡಿಸುವಂತಹ ಪ್ರಶ್ನೆಗಳು ಹೆಚ್ಚಾಗುತ್ತಿದ್ದು, ಪರೀಕ್ಷಾರ್ಥಿಗಳನ್ನು ಗೊಂದಲಕ್ಕೀಡು ಮಾಡುತ್ತಿದೆ. ಪ್ರತಿಬಾರಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆದಾಗ ಪ್ರಶ್ನೆ ಪತ್ರಿಕೆಯ ಸೋರಿಕೆಯಿಂದಾಗಿ ಅನೇಕ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ. ಈ ಬಗ್ಗೆ ಹೋರಾಟಗಳು ನಡೆದರೂ ಅಭ್ಯರ್ಥಿಗಳಿಗೆ ನ್ಯಾಯ ದೊರಕುವುದು ದೂರದ ಮಾತು. ಇದು ಕೇವಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮಾತ್ರವಲ್ಲ. ಸಾಕಷ್ಟು ಬಾರಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದನ್ನು, ವಿದ್ಯಾರ್ಥಿಗಳಿಗೆ ಗೊಂದಲ ಮೂಡಿಸುವ ಪ್ರಶ್ನೆಗಳಿರುವುದನ್ನು ನೋಡಿದ್ದೇವೆ. ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸುವಂತಹ ಶಿಕ್ಷಕರು ಅಥವಾ ಸಂಸ್ಥೆಯವರು ಯಾವುದೇ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸುವಾಗ ವಿದ್ಯಾರ್ಥಿ ಹಾಗೂ ಅಭ್ಯರ್ಥಿಗಳಿಗೆ ಗೊಂದಲ ಮೂಡಿಸುವ ಪ್ರಶ್ನೆಗಳನ್ನು ರಚಿಸದೆ, ಪ್ರಶ್ನೆಗಳನ್ನು ಸರಳವಾಗಿ ಅರ್ಥವಾಗುವಂತೆ ರಚಿಸಬೇಕು. ಅಲ್ಲದೆ ಪ್ರಶ್ನೆ ಪತ್ರಿಕೆಗಳು ಯಾವುದೇ ಕಾರಣಕ್ಕೂ ಸೋರಿಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಆಗ ಮಾತ್ರ ಪರೀಕ್ಷೆ ನಡೆಸುವ ಮೇಲೆ ವಿಶ್ವಾಸ ಮೂಡಲು ಸಾಧ್ಯ.

-ಬಿ.ಟಿ.ಅಂಬಿಕಾ, ಹಾಸನ.

ಆಂದೋಲನ ಡೆಸ್ಕ್

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

5 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

8 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

11 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

11 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

11 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

11 hours ago