ಇತ್ತೀಚೆಗೆ ವಿಜಯನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೇದಿಕೆ ಮೇಲೆ ಜಿಲ್ಲಾಧಿಕಾರಿಯವರನ್ನು ಅವಮಾನಿಸಿದ ಘಟನೆ ನಡೆದಿದೆ.
ಜಿಲ್ಲಾಧಿಕಾರಿಯವರು ಕುಳಿತಿದ್ದನ್ನು ಗಮನಿಸಿದ ಸಿದ್ದರಾಮಯ್ಯನವರು ಮೊದಲಿಗೆ ನೀವು ಯಾರು ಎಂದು ಕೇಳಿದ್ದಾರೆ. ಅವರು ಜಿಲ್ಲಾಧಿಕಾರಿ ಎಂದು ತಿಳಿದ ಬಳಿಕ, ನೀನೇಕೆ ಇಲ್ಲಿ ಕುಳಿತಿದ್ದೀಯ? ಸ್ವಾಮೀಜಿಯವರ ಪಕ್ಕದಲ್ಲಿ ಏಕೆ ಕುಳಿತಿದ್ದೀಯಾ? ಎಂದು ಹೇಳಿ ಹೋಗು ಹಿಂದೆ ಎಂದು ಏಕವಚನದಲ್ಲಿ ಗದರಿದ್ದಾರೆ. ಸಿದ್ದರಾಮಯ್ಯನವರ ಈ ನಡೆ ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತಹದಲ್ಲ. ಒಬ್ಬ ಐಎಎಸ್ ಅಧಿಕಾರಿಯನ್ನು ಹೀಗೆ ಸಾರ್ವಜನಿಕ ವೇದಿಕೆಯ ಮೇಲೆ ಅವಮಾನಿಸುವುದು ಎಷ್ಟು ಸರಿ? ಶಿಷ್ಟಾಚಾರದ ಪ್ರಕಾರ ಜಿಲ್ಲಾಧಿಕಾರಿ ವೇದಿಕೆ ಮೇಲೆ ಕುಳಿತುಕೊಳ್ಳಬಾರದು ಎಂದಿದ್ದರೆ, ಅವರನ್ನು ಕರೆದು ಸೌಜನ್ಯಯುತವಾಗಿ ಹಿಂದಿನ ಆಸನಗಳಲ್ಲಿ ಕುಳಿತುಕೊಳ್ಳಲು ಸೂಚಿಸಬಹುದಿತ್ತು. ಆದರೆ ಅಧಿಕಾರ ದರ್ಪದಿಂದ ಜಿಲ್ಲಾಧಿಕಾರಿಯನ್ನು ಏಕವಚನದಲ್ಲಿ ಹಿಂದೆ ಹೋಗು ಎಂದು ಹೇಳಿದ್ದು, ಮುಖ್ಯಮಂತ್ರಿಗಳ ಸಣ್ಣತನವನ್ನು ತೋರಿದೆ. ಅಲ್ಲದೆ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ ಸ್ವಾಮೀಜಿಗಳ ಜತೆ ವೇದಿಕೆ ಹಂಚಿಕೊಳ್ಳುವುದು ತಪ್ಪು ಎಂಬುದು ಇದರ ಅರ್ಥ ಎನ್ನುವಂತಾಗಿದೆ. ಸಿದ್ದರಾಮಯ್ಯನವರ ಈ ವರ್ತನೆ ನಿಜಕ್ಕೂ ಖಂಡನೀಯ.
–ಎ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ
ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…
ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…
ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…
ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…