ಇತ್ತೀಚೆಗೆ ವಿಜಯನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೇದಿಕೆ ಮೇಲೆ ಜಿಲ್ಲಾಧಿಕಾರಿಯವರನ್ನು ಅವಮಾನಿಸಿದ ಘಟನೆ ನಡೆದಿದೆ.
ಜಿಲ್ಲಾಧಿಕಾರಿಯವರು ಕುಳಿತಿದ್ದನ್ನು ಗಮನಿಸಿದ ಸಿದ್ದರಾಮಯ್ಯನವರು ಮೊದಲಿಗೆ ನೀವು ಯಾರು ಎಂದು ಕೇಳಿದ್ದಾರೆ. ಅವರು ಜಿಲ್ಲಾಧಿಕಾರಿ ಎಂದು ತಿಳಿದ ಬಳಿಕ, ನೀನೇಕೆ ಇಲ್ಲಿ ಕುಳಿತಿದ್ದೀಯ? ಸ್ವಾಮೀಜಿಯವರ ಪಕ್ಕದಲ್ಲಿ ಏಕೆ ಕುಳಿತಿದ್ದೀಯಾ? ಎಂದು ಹೇಳಿ ಹೋಗು ಹಿಂದೆ ಎಂದು ಏಕವಚನದಲ್ಲಿ ಗದರಿದ್ದಾರೆ. ಸಿದ್ದರಾಮಯ್ಯನವರ ಈ ನಡೆ ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತಹದಲ್ಲ. ಒಬ್ಬ ಐಎಎಸ್ ಅಧಿಕಾರಿಯನ್ನು ಹೀಗೆ ಸಾರ್ವಜನಿಕ ವೇದಿಕೆಯ ಮೇಲೆ ಅವಮಾನಿಸುವುದು ಎಷ್ಟು ಸರಿ? ಶಿಷ್ಟಾಚಾರದ ಪ್ರಕಾರ ಜಿಲ್ಲಾಧಿಕಾರಿ ವೇದಿಕೆ ಮೇಲೆ ಕುಳಿತುಕೊಳ್ಳಬಾರದು ಎಂದಿದ್ದರೆ, ಅವರನ್ನು ಕರೆದು ಸೌಜನ್ಯಯುತವಾಗಿ ಹಿಂದಿನ ಆಸನಗಳಲ್ಲಿ ಕುಳಿತುಕೊಳ್ಳಲು ಸೂಚಿಸಬಹುದಿತ್ತು. ಆದರೆ ಅಧಿಕಾರ ದರ್ಪದಿಂದ ಜಿಲ್ಲಾಧಿಕಾರಿಯನ್ನು ಏಕವಚನದಲ್ಲಿ ಹಿಂದೆ ಹೋಗು ಎಂದು ಹೇಳಿದ್ದು, ಮುಖ್ಯಮಂತ್ರಿಗಳ ಸಣ್ಣತನವನ್ನು ತೋರಿದೆ. ಅಲ್ಲದೆ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ ಸ್ವಾಮೀಜಿಗಳ ಜತೆ ವೇದಿಕೆ ಹಂಚಿಕೊಳ್ಳುವುದು ತಪ್ಪು ಎಂಬುದು ಇದರ ಅರ್ಥ ಎನ್ನುವಂತಾಗಿದೆ. ಸಿದ್ದರಾಮಯ್ಯನವರ ಈ ವರ್ತನೆ ನಿಜಕ್ಕೂ ಖಂಡನೀಯ.
–ಎ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…