ತೆಲಂಗಾಣ ರಾಜ್ಯದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೇ 55 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.
ಇದು ಇಡೀ ದೇಶಕ ಅನುಕರಣೀಯ ನಡೆ ಇದೇ ಹಾದಿಯಲ್ಲಿ ಹಾದಿಯಲ್ಲಿ ಕರ್ನಾಟಕ ಸರ್ಕಾರ ಕೂಡ ನಡೆಯಬೇಕಲ್ಲವೇ? 2023ರ ರಾಜ್ಯ ವಿಧಾನಸಭಾ ಚುನಾವಣಾ ಪೂರ್ವ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರ ಖಾಲಿ ಇರುವ 2.52 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿತ್ತು. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ಮುಕ್ಕಾಲು ವರ್ಷ ಆಗುತ್ತಿದ್ದರೂ ಅದು ಕೇವಲ ಘೋಷಣೆಯಾಗಿ ಉಳಿದಿದೆ. ರಾಜ್ಯಾದ್ಯಂತ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಹಗಲು ರಾತ್ರಿ ಎನ್ನದೆ ಪರೀಕ್ಷೆಗಳಿಗೆ ತಯಾರಿ ನಡೆಸಿದ್ದಾರೆ.
ಇವರ ವಯಸ್ಸು ಕೂಡ ಮೀರುತ್ತಿದ್ದು, ಪರೀಕ್ಷೆ ಬರೆಯುವ ಅರ್ಹತೆಯನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಯೋಗ ಗ್ಯಾರಂಟಿಯನ್ನು ಕರುಣಿಸುವ ಮೂಲಕ ತೆಲಂಗಾಣ ರಾಜ್ಯದಂತೆ ಮಾದರಿ ಹೆಜ್ಜೆ ಇಡಬೇಕು.
-ಅನಿಲ್ ಕುಮಾರ್, ನಂಜನಗೂಡು





