Mysore
28
scattered clouds

Social Media

ಶುಕ್ರವಾರ, 23 ಜನವರಿ 2026
Light
Dark

ಓದುಗರ ಪತ್ರ: ಬ್ಯಾರಿಕೇಡ್‌ಗಳು ಸದ್ಬಳಕೆಯಾಗಲಿ

ಓದುಗರ ಪತ್ರ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಮಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಬಯಲು ರಂಗಮಂದಿರದಲ್ಲಿ ನಡೆದ ‘ಯುವ ಸಂಭ್ರಮ’ ಕಾರ್ಯಕ್ರಮಗಳ ಸಂದರ್ಭದಲ್ಲಿ ಬಳಸಲಾಗಿದ್ದ ಬ್ಯಾರಿಕೇಡ್‌ಗಳನ್ನು ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಸ್ಮಾರಕ ಇರುವ ಮುಖ್ಯ ದ್ವಾರದ ಪಕ್ಕದ ಕಾಂಪೌಂಡ್ ಮತ್ತು ಮೋರಿಗೆ ಎಸೆಯಲಾಗಿದೆ.

ಮೈಸೂರಿನಲ್ಲಿ ಸಭೆ, ಸಮಾರಂಭಗಳು ನಡೆದಾಗ, ಗಣ್ಯ ವ್ಯಕ್ತಿಗಳು ನಗರಕ್ಕೆ ಭೇಟಿ ನೀಡಿದಸಂದರ್ಭದಲ್ಲಿ ಸಂಚಾರ ವ್ಯವಸ್ಥೆಯನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಖಾಸಗಿ ಸಂಸ್ಥೆಗಳ ಸಿಎಸ್‌ಆರ್(ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ)ನಲ್ಲಿ ಬ್ಯಾರಿಕೇಡ್‌ಗಳನ್ನು ತಯಾರಿಸುತ್ತದೆ. ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಳಸಲಾಗುತ್ತಿದೆ. ಆದರೆ ಸಾವಿರಾರು ರೂ. ವೆಚ್ಚದಲ್ಲಿ ತಯಾರಿಸಿದ ಬ್ಯಾರಿಕೇಡ್‌ಗಳನ್ನು ಎಲ್ಲೆಂದರಲ್ಲಿ ಎಸೆಯುವ ಬದಲು ಸದ್ಬಳಕೆ ಮಾಡಿಕೊಳ್ಳಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಾಗಿದೆ.

– ನಾಗೇಶ್, ಮಾನಸಗಂಗೋತ್ರಿ, ಮೈಸೂರು

Tags:
error: Content is protected !!