ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ ಇದು ಕೇವಲ ನಾಮಕಾವಸ್ತೆಗಾಗಿ ಕಟ್ಟಿರುವ ಬಸ್ ನಿಲ್ದಾಣವಾಗಿದೆ. ಏಕೆಂದರೆ ಈ ಬಸ್ ನಿಲ್ದಾಣಕ್ಕೆ ಯಾವುದೇ ಸಾರಿಗೆ ನಿಗಮದ ಬಸ್‌ಗಳನ್ನು ನಿಲ್ಲಿಸುವುದಿಲ್ಲ, ಈ ಸರ್ಕಲ್‌ಗೆ ಬರುವ ಕೆಎಸ್ ಆರ್‌ಟಿಸಿ ಬಸ್‌ಗಳೆಲ್ಲವೂ ಶಾರದಾ ದೇವಿನಗರ ಸರ್ಕಲ್‌ನ ಮುಖ್ಯ ರಸ್ತೆಯಲ್ಲೇ ನಿಲುಗಡೆ ಮಾಡುತ್ತಾರೆ. ಈ ಮುಖ್ಯ ರಸ್ತೆಯಲ್ಲೇ ಉರಿಯುವ ಬಿಸಿಲಿನಲ್ಲಿ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು ಕೆಎಸ್‌ಆರ್‌ಟಿಸಿ ಬಸ್‌ಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹೊಸದಾಗಿ ನಿರ್ಮಾಣ ಆಗಿರುವ ಬಸ್ ನಿಲ್ದಾಣದಲ್ಲಿ ಕೆಲವರು ಖಾಸಗಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದಾರೆ. ಇಷ್ಟು ಹಣ ಖರ್ಚು ಮಾಡಿ ನೂತನ ಬಸ್ ನಿಲ್ದಾಣ ನಿರ್ಮಾಣ ಮಾಡಿರುವುದು ಕಾಂಟ್ರಾಕ್ಟ್‌ಗಳ ಜೇಬು ತುಂಬಿಸಲು ಮತ್ತು ಖಾಸಗಿ ವಾಹನಗಳನ್ನು ಪಾರ್ಕಿಂಗ್ ಮಾಡಲು ಇರಬಹುದು ಎನಿಸುತ್ತದೆ. ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳು ಶಾರದಾ ದೇವಿ ಸರ್ಕಲ್‌ನಿಂದ ಹೊರಡುವ ಸಾರಿಗೆ ನಿಗಮದ ಎಲ್ಲಾ ಬಸ್ಗಳು ಕಡ್ಡಾಯವಾಗಿ ಹೊಸ ಬಸ್ ನಿಲ್ದಾಣಕ್ಕೆ ಬಂದು ಹೋಗುವ ವ್ಯವಸ್ಥೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…