Andolana originals

ಓದುಗರ ಪತ್ರ: ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ ಇದು ಕೇವಲ ನಾಮಕಾವಸ್ತೆಗಾಗಿ ಕಟ್ಟಿರುವ ಬಸ್ ನಿಲ್ದಾಣವಾಗಿದೆ. ಏಕೆಂದರೆ ಈ ಬಸ್ ನಿಲ್ದಾಣಕ್ಕೆ ಯಾವುದೇ ಸಾರಿಗೆ ನಿಗಮದ ಬಸ್‌ಗಳನ್ನು ನಿಲ್ಲಿಸುವುದಿಲ್ಲ, ಈ ಸರ್ಕಲ್‌ಗೆ ಬರುವ ಕೆಎಸ್ ಆರ್‌ಟಿಸಿ ಬಸ್‌ಗಳೆಲ್ಲವೂ ಶಾರದಾ ದೇವಿನಗರ ಸರ್ಕಲ್‌ನ ಮುಖ್ಯ ರಸ್ತೆಯಲ್ಲೇ ನಿಲುಗಡೆ ಮಾಡುತ್ತಾರೆ. ಈ ಮುಖ್ಯ ರಸ್ತೆಯಲ್ಲೇ ಉರಿಯುವ ಬಿಸಿಲಿನಲ್ಲಿ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು ಕೆಎಸ್‌ಆರ್‌ಟಿಸಿ ಬಸ್‌ಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹೊಸದಾಗಿ ನಿರ್ಮಾಣ ಆಗಿರುವ ಬಸ್ ನಿಲ್ದಾಣದಲ್ಲಿ ಕೆಲವರು ಖಾಸಗಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದಾರೆ. ಇಷ್ಟು ಹಣ ಖರ್ಚು ಮಾಡಿ ನೂತನ ಬಸ್ ನಿಲ್ದಾಣ ನಿರ್ಮಾಣ ಮಾಡಿರುವುದು ಕಾಂಟ್ರಾಕ್ಟ್‌ಗಳ ಜೇಬು ತುಂಬಿಸಲು ಮತ್ತು ಖಾಸಗಿ ವಾಹನಗಳನ್ನು ಪಾರ್ಕಿಂಗ್ ಮಾಡಲು ಇರಬಹುದು ಎನಿಸುತ್ತದೆ. ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳು ಶಾರದಾ ದೇವಿ ಸರ್ಕಲ್‌ನಿಂದ ಹೊರಡುವ ಸಾರಿಗೆ ನಿಗಮದ ಎಲ್ಲಾ ಬಸ್ಗಳು ಕಡ್ಡಾಯವಾಗಿ ಹೊಸ ಬಸ್ ನಿಲ್ದಾಣಕ್ಕೆ ಬಂದು ಹೋಗುವ ವ್ಯವಸ್ಥೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.

– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 hour ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

2 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

2 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

2 hours ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

2 hours ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

2 hours ago