ಓದುಗರ ಪತ್ರ
ಬಸ್ ತಂಗುದಾಣದ ಮುಂಭಾಗ ಪ್ರಯಾಣಿಕರು ನಿಂತಿದ್ದರೂ ತಂಗುದಾಣದ ಮುಂದೆ ಕೆಎಸ್‌ಆರ್‌ಟಿಸಿ ಬಸ್‌ಗಳು ನಿಲುಗಡೆ ನೀಡದೆ ಮುಂದೆ ಹೋಗಿ ನಿಲುಗಡೆ ನೀಡುತ್ತಿದ್ದು, ಪ್ರಯಾಣಿಕರು ಓಡಿ ಹೋಗಿ ಬಸ್ ಹತ್ತಬೇಕಾದ ಪರಿಸ್ಥಿತಿ ಇಂದಿಗೂ ಮುಂದುವರಿಯುತ್ತಿದೆ.
ನಾನು ವಿದ್ಯಾರ್ಥಿಯಾದಗಿನಿಂದಲೂ (೪೦ ವರ್ಷಗಳ ಹಿಂದೆ) ಈ ಸಮಸ್ಯೆ ಇದೆ. ಅದು ಈಗಲೂ ಮುಂದುವರಿಯುತ್ತಿರುವುದು ಶೋಚನೀಯ. ಹಲವಾರು ಬಾರಿ ನಾನು ಗಮನಿಸಿದ ಹಾಗೆ ಕೆಲವು ಬಸ್ ಚಾಲಕರು, ಪ್ರಯಾಣಿಕರು ಓಡಿ ಬಂದೇ ಬಸ್ ಹತ್ತಲಿ ಎಂದು ತಂಗುದಾಣದ ಎದುರು ಬಸ್ ನಿಲುಗಡೆ ನೀಡದೆ, ಮುಂದೆಲ್ಲೋ ನಿಲುಗಡೆ ನೀಡುತ್ತಾರೆ. ಇದರಿಂದಾಗಿ ಹಿರಿಯ ನಾಗರಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಕಷ್ಟ ಪಟ್ಟು ಬಸ್ ಹತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಕೆಲ ಬಸ್ ಚಾಲಕರು ರಾತ್ರಿ ವೇಳೆ ನಿಗದಿತ ಮಾರ್ಗದಲ್ಲಿ ಸಂಚರಿಸದೇ ಬದಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದು, ಇದರಿಂದಾಗಿ ನಿಗದಿತ ರಸ್ತೆಯಲ್ಲಿ ಬಸ್ಸಿಗಾಗಿ ಕಾಯುವ ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿದೆ. ಆದ್ದರಿಂದ ಸಾರಿಗೆ ಇಲಾಖೆಯ ಅಧಿಕಾರಿಗಳು ಇಂತಹ ಸೂಕ್ಷ ವಿಚಾರಗಳ ಬಗ್ಗೆ ಗಮನಹರಿಸಿ, ಬಸ್ ತಂಗುದಾಣಗಳ ಮುಂದೆಯೇ ಬಸ್ ನಿಲುಗಡೆ ನೀಡುವಂತೆ ಚಾಲಕರಿಗೆ ಸೂಚಿಸಬೇಕಿದೆ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…