ಓದುಗರ ಪತ್ರ
ಪ್ರತಿ ವರ್ಷದಂತೆ ಈ ವರ್ಷವೂ ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಬೀಜ ತಯಾರಿಸುವ ಕಂಪೆನಿಗಳೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದು, ರೈತರಿಗೆ ನಷ್ಟ ಉಂಟಾಗಿದೆ. ಆದ್ದರಿಂದ ಕಂಪೆನಿಗಳಿಂದಲೇ ಪರಿಹಾರ ವಸೂಲಿ ಮಾಡಿ, ನಷ್ಟ ಅನುಭವಿಸಿದ ರೈತರಿಗೆ ನೀಡಬೇಕು ಎಂದು ತಿ.ನರಸೀಪುರ ರಾಜ್ಯ ರೈತ ಸಂಘದ ತಾಲ್ಲೂಕು ಘಟಕ ಆಗ್ರಹಿಸಿರುವುದು ಸ್ವಾಗತಾರ್ಹ.
ಕೃಷಿ ಇಲಾಖೆಯು ವಿತರಿಸುವ ಮುಸುಕಿನ ಜೋಳ ಬಿತ್ತನೆ ಬೀಜದ ಪ್ಯಾಕೆಟ್ ಒಂದರಲ್ಲಿ ೪ ಕೆಜಿ ಬಿತ್ತನೆ ಬೀಜ ಇದ್ದು ೬೦೦ ರೂ. ಪಡೆಯುತ್ತಾರೆ. ಒಂದು ಕ್ವಿಂಟಾಲ್ ಬಿತ್ತನೆ ಬೀಜಕ್ಕೆ ೧೫ ಸಾವಿರ ಪಡೆಯುವ ಕೃಷಿ ಇಲಾಖೆ ರೈತರಿಂದ ಒಂದು ಕ್ವಿಂಟಾಲ್ ಮುಸುಕಿನ ಜೋಳವನ್ನು ಕೇವಲ ೨೦೦ ರೂ.ಗಳಿಂದ ೨,೫೦೦ ರೂ. ನೀಡಿ ಖರೀದಿಸುತ್ತದೆ. ಈ ಹಿಂದೆ ರೈತರು ತಾವು ಬೆಳೆದ ಫಸಲನ್ನು ಎಷ್ಟು ಬೇಕೋ ಅಷ್ಟೇ ಮಾರಾಟ ಮಾಡಿ, ಉಳಿದದ್ದನ್ನು ತಾವೇ ಬಿತ್ತನೆ ಮಾಡಲು ಉಪಯೋಗಿಸಿಕೊಳ್ಳುತ್ತಿದ್ದರು, ಈಗ ಅದೇ ಪದ್ಧತಿಯನ್ನು ಅನುಸರಿಸಿದರೆ ಮಾತ್ರ ರೈತ ಬದುಕಲು ಸಾಧ್ಯ ಎಂದು ರಾಜ್ಯ ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಶಂಕರ್ ಅವರು ಕಿವಿಮಾತು ಹೇಳಿರುವುದು ಸಮಂಜಸವಾಗಿದೆ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…