Andolana originals

ಓದುಗರ ಪತ್ರ: ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆಯಾಗಲಿ

ಗೃಹಲಕ್ಷ್ಮೀ ಯೋಜನೆಯ ಹಣ ಕಳೆದ ಮೂರು ತಿಂಗಳುಗಳಿಂದ ಮಹಿಳೆಯರ ಖಾತೆಗೆ ತಲುಪಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ‘ಗೃಹ ಲಕ್ಷ್ಮೀ ಯೋಜನೆ ಏನು ಮಹಿಳೆಯರಿಗೆ ಪ್ರತಿ ತಿಂಗಳು ಸಂಬಳ ಕೊಡುವ ಯೋಜನೆ ಅಲ್ಲವಲ್ಲ’  ಎಂದು ರಾಜ್ಯದ ಇಂಧನ ಸಚಿವ ಕೆ.ಜೆ. ಜಾರ್ಜ್ ಉತ್ತರಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣೆಯ ವೇಳೆ ೫ ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಭರವಸೆ ನೀಡಿತ್ತು. ಆ ಪೈಕಿ ಗೃಹಲಕ್ಷ್ಮೀ  ಯೋಜನೆಯಡಿ ಮಹಿಳೆಯರಿಗೆ ಮಾಸಿಕ ೨,೦೦೦ ರೂ. ಮತ್ತು ಅನ್ನಭಾಗ್ಯ ಯೋಜನೆಯಡಿ ೫ ಕೆ.ಜಿ. ಅಕ್ಕಿಯ ಬದಲಾಗಿ ಹಣವನ್ನು ನೀಡುತ್ತಿತ್ತು. ಆದರೆ, ಕಳೆದ ಮೂರು ತಿಂಗಳುಗಳಿಂದ ಈ ಹಣ ಫಲಾನುಭವಿಗಳ ಖಾತೆಗೆ ಜಮೆ ಆಗಿಲ್ಲ. ಈ ಬಗ್ಗೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಸಚಿವರು ಈ ರೀತಿ ಉಡಾಫೆ ಉತ್ತರ ನೀಡಿರುವುದು ಸರಿಯಲ್ಲ.

ಅಧಿಕಾರಕ್ಕೆ ಬರುವ ಮುನ್ನ ನೀಡಿದ ಭರವಸೆಯಂತೆ ನಡೆದುಕೊಳ್ಳದೆ,  ಅಧಿಕಾರಕ್ಕೆ ಬಂದ ಬಳಿಕ ಈಗ ಅದೇನು ಪ್ರತಿ ತಿಂಗಳು ನೀಡುವ ಸರ್ಕಾರಿ ಸಂಬಳವೇ ಎಂದು ಹೇಳುವುದು ಎಷ್ಟು ಸರಿ? ಯಾರೂ ಕೂಡ ನಮಗೆ ಮಾಸಿಕ ಎರಡು ಸಾವಿರ ರೂ. ನೀಡಿ ಎಂದು ಕೇಳಿಲ್ಲ. ಅಧಿಕಾರಕ್ಕೇರುವ   ಸಲುವಾಗಿ, ನೀವೇ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಈಗ ಅವುಗಳನ್ನು ಸರಿಯಾಗಿ ಕಾರ್ಯರೂಪಕ್ಕೆ ತರದೆ ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂದುಕೊಳ್ಳುವುದು ಸರಿಯಲ್ಲ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

4 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

4 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

5 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

5 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

6 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

7 hours ago