ಓದುಗರ ಪತ್ರ
ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ ದೇಣಿಗೆಯಿಂದ ದೇವಾಲಯಗಳ ಜೀರ್ಣೋದ್ಧಾರ, ಹಬ್ಬ, ಜಾತ್ರೆ ಮೊದಲಾದ ಸಂದರ್ಭಗಳಲ್ಲಿ ಅನ್ನದಾನ ಮಾಡುತ್ತಿರುವುದು ಶ್ಲಾಘನೀಯ.
ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಹಣ ಕೇವಲ ಅದ್ಧೂರಿ ಅಲಂಕಾರ ಮತ್ತು ಉತ್ಸವಗಳಿಗೆ ಮಾತ್ರ ಸೀಮಿತವಾಗಬಾರದು. ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಆಸರೆಯಾಗಬೇಕು, ಉದಯೋನ್ಮುಖ ಕ್ರೀಡಾಪಟುಗಳಿಗೆ ಬೆಂಬಲ ನೀಡಬೇಕು ಹಾಗೂ ಬಡ ರೋಗಿಗಳ ಚಿಕಿತ್ಸೆಗಾಗಿ ಒಂದು ‘ಆರೋಗ್ಯ ನಿಧಿ’ಯಾಗಿ ರೂಪುಗೊಳ್ಳಬೇಕು. ‘ಜನಸೇವೆಯೇ ಜನಾರ್ಧನನ ಸೇವೆ’ ಎನ್ನುವಂತೆ, ದೇವಸ್ಥಾನದ ಹುಂಡಿಯಲ್ಲಿ ಸಂಗ್ರಹವಾಗುವ ಹಣ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕಿನಲ್ಲಿ ಬೆಳಕಾದಾಗ ದೇವರಿಗೂ ಪ್ರೀತಿಯಾಗುತ್ತದೆ. ಈ ನಿಟ್ಟಿನಲ್ಲಿ ಮೈಸೂರು ಭಾಗದ ದೇವಾಲಯಗಳ ಎಲ್ಲಾ ಧರ್ಮದರ್ಶಿಗಳು ಮತ್ತು ಪದಾಧಿಕಾರಿಗಳು ಇಂತಹ ಸಮಾಜಮುಖಿ ಕಾರ್ಯಗಳ ಮೂಲಕ ಮಾದರಿಯಾಗಬೇಕು.
-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…