ಕಳೆದ ವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ೧೪ ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ನಟಿ ರನ್ಯಾ ರಾವ್ ಬಂಧಿಸಲಾಗಿದ್ದು, ಈ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ರನ್ಯಾ ರಾವ್ ಕಳೆದ ಒಂದು ವರ್ಷದ ಅವಧಿಯಲ್ಲಿ ದುಬೈಗೆ ೨೮ ಬಾರಿ ತೆರಳಿದ್ದು, ಪ್ರತಿ ಬಾರಿಯೂ ಅಕ್ರಮವಾಗಿ ಚಿನ್ನವನ್ನು ಸಾಗಾಣಿಕೆ ಮಾಡಿದ್ದಾರೆ. ಅಲ್ಲದೆ ಪ್ರತಿ ಕೆ.ಜಿ.ಗೆ ಸುಮಾರು ೪ ಲಕ್ಷ ರೂ.ಗಳವರೆಗೂ ಲಾಭ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ವಿಶ್ವ ಪ್ರಖ್ಯಾತಿ ಪಡೆದಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಷ್ಟೊಂದು ಸೆಕ್ಯೂರಿಟಿ ಇದ್ದರೂ ರನ್ಯಾ ರಾವ್ ಚಿನ್ನ ಕಳ್ಳ ಸಾಗಾಣಿಕೆ ಮಾಡಿದ್ದಾರೆ ಎಂದರೆ ಆಕೆಗೆ ಪ್ರಭಾವಿ ವ್ಯಕ್ತಿಗಳ ಒಡನಾಟವಿರಬಹುದು ಎಂಬ ಅನುಮಾನ ಮೂಡುತ್ತದೆ. ಆದ್ದರಿಂದ ಸರ್ಕಾರ ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಪ್ರಕರಣದಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆ ವಿಽಸುವ ಮೂಲಕ ಚಿನ್ನ ಕಳ್ಳ ಸಾಗಾಣಿಕೆಗೆ ಕಡಿವಾಣ ಹಾಕಬೇಕಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ ತಾ.





