ಓದುಗರ ಪತ್ರ
ಇರಾನ್ ಮತ್ತು ಇಸ್ರೇಲ್ ಮಧ್ಯೆ ನಡೆಯುತ್ತಿರುವ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆಗೆ ಕಾರಣವಾಗಿದೆ. ಇರಾನಿನ ರಾಜಧಾನಿ ಟೆಹರಾನ್ ಮತ್ತು ಇತರ ನಗರಗಳ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿ ಆತಂಕ ಮೂಡಿಸಿದೆ.
ಇಸ್ರೇಲ್‌ನ ವೈಮಾನಿಕ ಹಾಗೂ ಡ್ರೋನ್ ದಾಳಿಗಳು ವಿಶೇಷವಾಗಿ ಇರಾನಿನ ಅಣು ಸ್ಥಾವರಗಳು, ರಕ್ಷಣಾ ಸ್ಥಾವರಗಳು ಹಾಗೂ ಇರಾನಿನ ಇಸ್ಲಾಂ ನಾಯಕರ ನಿವಾಸಗಳ ಮೇಲೆ ನಡೆಯುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ದಶಕಗಳಿಂದಲೂ ಹೊಗೆಯಾಡುತ್ತಿದ್ದ ವೈರತ್ವ ಈಗ ಸೋಟಗೊಂಡಿದ್ದು, ಇಡೀ ವಿಶ್ವದಲ್ಲೇ ತಲ್ಲಣವನ್ನು ಸೃಷ್ಟಿಸಿದೆ. ಇಸ್ರೇಲ್ ಸಣ್ಣ ರಾಷ್ಟ್ರವಾದರೂ ಅತ್ಯಾಧುನಿಕ ಹಾಗೂ ಸುಸಜ್ಜಿತ ಸೇನೆಯನ್ನು ಒಳಗೊಂಡಿದ್ದು, ಪರಮಾಣು ಅಸ್ತ್ರಗಳನ್ನು ಹೊಂದಿದ ಬಲಿಷ್ಠ ರಾಷ್ಟ್ರವಾಗಿದೆ. ಅದೂ ಅಲ್ಲದೆ ಇಡೀ ವಿಶ್ವದಲ್ಲೇ ಗೆರಿಲ್ಲಾ ಯುದ್ಧ ತಂತ್ರಕ್ಕೆ ಹೆಸರು ವಾಸಿಯಾಗಿದೆ. ಇರಾನ್ ಕೂಡ ಬಲಿಷ್ಠ ರಾಷ್ಟ್ರವಾಗಿದ್ದು ಇಸ್ಲಾಂ ರಾಷ್ಟ್ರಗಳ ಬೆಂಬಲವನ್ನು ಪಡೆದುಕೊಂಡಿದೆ. ಯುದ್ಧ ಇನ್ನೂ ತೀವ್ರ ಸ್ವರೂಪ ಪಡೆದುಕೊಂಡು ಪರಮಾಣು ಯುದ್ಧವಾಗಿ ಕೂಡ ಪರಿಣಮಿಸಬಹುದು. ಅನೇಕ ದೇಶಗಳಲ್ಲಿ ತೈಲ ಬೆಲೆ ಒಂದೇ ಸಮನೇ ಏರುತ್ತಿದೆ. ಅನೇಕ ದೇಶಗಳ ಷೇರುಪೇಟೆಗಳು ಕುಸಿಯಲು ಪ್ರಾರಂಭಿಸಿವೆ. ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳು ಯುದ್ಧವನ್ನು ನಿಲ್ಲಿಸುವಂತೆ ಈ ಎರಡೂ ದೇಶಗಳ ಮೇಲೆ ಒತ್ತಡ ಹಾಕುತ್ತಿವೆ. ವಿಶ್ವಸಂಸ್ಥೆ ಕೂಡ ಯುದ್ಧವನ್ನು ಸ್ಥಗಿತಗೊಳಿಸಲು ಶ್ರಮಿಸುತ್ತಿದೆ. ಇರಾನ್ ಮತ್ತು ಇಸ್ರೇಲ್ ಈಗಲಾದರೂ ಯುದ್ಧವನ್ನು ನಿಲ್ಲಿಸಿ, ತಮ್ಮ ತಮ್ಮ ಸಮಸ್ಯೆಗಳನ್ನು ರಾಜತಾಂತ್ರಿಕ ವಿಧಾನಗಳ ಮೂಲಕ ಪರಿಹರಿಸಿಕೊಳ್ಳುವುದು ಅಗತ್ಯವಾಗಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…