ಓದುಗರ ಪತ್ರ
ಮಂಡ್ಯ ಸೀಮೆಯ ಆರ್ಥಿಕ, ಸಾಮಾಜಿಕ, ಕೈಗಾರಿಕೆ, ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಕಾರ್ಯದಲ್ಲಿ ಮೈಸೂರು ರಾಜವಂಶಸ್ಥರ ಕೊಡುಗೆ ಅಪಾರ.
ಕೃಷ್ಣರಾಜ ಒಡೆಯರ್ ಅವರ ಕಾಲದಲ್ಲಿ ೧೯೩೯ ರಲ್ಲಿ ಮೈಸೂರು ಜಿಲ್ಲೆಯಿಂದ ಪ್ರತ್ಯೇಕವಾಗಿ ಮಂಡ್ಯ ಜಿಲ್ಲಾ ಕೇಂದ್ರವಾಗಿ ರೂಪುಗೊಂಡಿತು.
ಮೈಸೂರು ಸಂಸ್ಥಾನವನ್ನಾಳಿದ ಒಡೆಯರ್ ವಂಶದ ಕೊನೆಯ ಅರಸರಾದ ಜಯಚಾಮರಾಜ ಒಡೆಯರ್ ಅವರು ಮಂಡ್ಯದಲ್ಲಿ ಶಿಕ್ಷಣಕ್ಕಾಗಿ ಕಲ್ಲುಕಟ್ಟಡ, ಸಾರ್ವಜನಿಕರ ಅನುಕೂಲಕ್ಕಾಗಿ ಮಾರುಕಟ್ಟೆ ನಿರ್ಮಾಣ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಮಂಡ್ಯದಲ್ಲಿ ಇರುವ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ನಾಡ ಪ್ರಭು ಕೆಂಪೇಗೌಡ ಪ್ರತಿಮೆ ನಿರ್ಮಿಸುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ. ಅಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ನಿರ್ಮಿ ಸಿದರೆ ಜಯಚಾಮರಾಜ ಒಡೆಯರ್ ಅವರ ಹೆಸರು ಅಳಿಸಿಹೋಗಿ ಕೆಂಪೇಗೌಡ ವೃತ್ತ ಎಂದು ಕರೆಯಲಾಗುತ್ತದೆ. ಆ ರೀತಿಯಾದರೆ ಅದು ಚಾಮರಾಜ ಒಡೆಯರ್ ಅವರಿಗೆ ಅಪಮಾನ ಮಾಡಿದಂತಾಗುತ್ತದೆ. ಜಯಚಾಮ ರಾಜ ಒಡೆಯರ್ ವೃತ್ತದ ಹೆಸರನ್ನು ಉಳಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಈ ಬಗ್ಗೆ ಶಾಸಕರು ಗಮನಹರಿಸಬೇಕಾಗಿದೆ. ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಸೂಕ್ತ ಮತ್ತು ಪರ್ಯಾಯ ಸ್ಥಳವನ್ನು ಗುರುತಿಸಲಿ.
– ಸಿ. ಸಿದ್ದರಾಜು ಆಲಕೆರೆ, ಮಂಡ್ಯ
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…