Andolana originals

ಓದುಗರ ಪತ್ರ: ಜನಪ್ರತಿನಿಧಿಗಳು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸಲಿ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ಜೈಲುಪಾಲು, ಅಕ್ರಮ ಬೆಟ್ಟಿಂಗ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮೂಲದ ಶಾಸಕನ ಬಂಧನ ಹಾಗೂ ಲಂಚಕ್ಕೆ ಕೈಯೊಡ್ಡಿ ಸಿಕ್ಕಿಬಿದ್ದ ಶಾಸಕ ಲೋಕಾಯುಕ್ತ ಪೊಲೀಸರ ವಶಕ್ಕೆ.. ಈ ರೀತಿಯ ಹತ್ತು ಹಲವು ಸುದ್ದಿಗಳನ್ನು ಮಾಧ್ಯಮಗಳಲ್ಲಿ ನೋಡಿದಾಗ ಅವರನ್ನು ಜನಪ್ರತಿನಿಧಿಗಳನ್ನಾಗಿ ಆಯ್ಕೆ ಮಾಡಿದ ಮತದಾರರ ಮನಸ್ಸಿಗೆ ಬೇಸರವಾಗುತ್ತದೆ.

ಶಾಸಕರು ಜನಪ್ರತಿನಿಧಿಗಳು. ವಿಧಾನಸಭೆಯಲ್ಲಿ ಅವರು ಶಾಸನ ರಚನೆ ಮಾಡಬೇಕಾದ ಜವಾಬ್ದಾರಿ ಹೊಂದಿರುತ್ತಾರೆ. ಆದರೆ ಕೆಲ ಶಾಸಕರು ತಮ್ಮ ಜವಾಬ್ದಾರಿ ಮರೆತು ಕಾನೂನು ಉಲ್ಲಂಘನೆ ಮಾಡಿ ಜೈಲು ಪಾಲಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ತಮ್ಮ ಕ್ಷೇತ್ರದ ಜನರ ಧ್ವನಿಯಾಗಿ ಮತದಾರರ ಕುಂದುಕೊರತೆಗಳನ್ನು ಆಲಿಸಿ ಸರ್ಕಾರದಿಂದ ಪರಿಹಾರ ಒದಗಿಸಬೇಕಾದ ಜನಪ್ರತಿನಿಧಿಗಳೇ ಈ ರೀತಿ ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗಿ ಜೈಲು ಪಾಲಾಗುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡುತ್ತಿರುವ ಅಪಮಾನ.

ಶಾಸಕರು ಆರೋಪಿಗಳಾಗುವುದು ದೊಡ್ಡ ಕಳಂಕ. ಇಂತಹ ಸಂದರ್ಭದಲ್ಲಿ ಪ್ರತಿಯೊಬ್ಬ ಶಾಸಕರೂ ತಾನು ಹೊಂದಿರುವ ಸ್ಥಾನದ ಮಹತ್ವವನ್ನು ಅರಿತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವ ಅವಶ್ಯಕತೆ ಇದೆ. ಅದೇ ರೀತಿ ಪ್ರತಿಯೊಬ್ಬ ಮತದಾರನೂ ಸದೃಢವಾದ ದೇಶ ಕಟ್ಟಲು ಹಾಗೂ ಭ್ರಷ್ಟಾಚಾರ ಮುಕ್ತ ಸಮಾಜವನ್ನು ನಿರ್ಮಿಸಲು ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಗೆ ಮತ ಚಲಾಯಿಸುವ ಅವಶ್ಯಕತೆಯಿದೆ.

 -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಾಗನಹಳ್ಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…

12 mins ago

ಓದುಗರ ಪತ್ರ: ತಾಲ್ಲೂಕು ಕಚೇರಿ ಆವರಣದಲ್ಲಿ ಕಸ ತೆರವುಗೊಳಿಸಿ

ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…

14 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಶಿವರಾಜಕುಮಾರ್-‘ಆನಂದ್’೪೦ರ ವೇಳೆ-ಆ ದಿನಗಳ ನೆನಪು

ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…

20 mins ago

ಸಫಾರಿ ಪುನಾರಂಭಕ್ಕೆ ಸಾರ್ವಜನಿಕರ ಮಿಶ್ರ ಪ್ರತಿಕ್ರಿಯೆ

ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…

26 mins ago

ಕುಶಾಲನಗರ: ಕೆಎಸ್‌ಆರ್‌ಟಿಸಿ ಡಿಪೋ ಕಾಮಗಾರಿ ಚುರುಕು

ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ  ಮಡಿಕೇರಿ: ಕುಶಾಲನಗರದ ಬಹು…

37 mins ago

ಪಿಡಿಒನಿಂದ ಸರ್ಕಾರಿ ಆಸ್ತಿ ಗುಳುಂ ಆರೋಪ

ಮಹಾದೇಶ್ ಎಂ. ಗೌಡ ಹನೂರು : ಸರ್ಕಾರದ ಆಸ್ತಿ ರಕ್ಷಣೆ ಮಾಡಬೇಕಾದ ಅಧಿಕಾರಿಯೇ ಸರ್ಕಾರಿ ಆಸ್ತಿಯನ್ನು ಗುಳುಂ ಮಾಡಿರುವ ಗಂಭೀರ…

45 mins ago