Andolana originals

ಓದುಗರ ಪತ್ರ: ಹೆದ್ದಾರಿಯಲ್ಲಿನ ಗಿಡಗಳ ರಕ್ಷಣೆಯಾಗಲಿ

ಮೈಸೂರು-ಬೆಂಗಳೂರು ಹೈವೆಯ ಡಿವೈಡರ್‌ಗಳಲ್ಲಿ ಬೆಳೆಸಲಾಗಿದ್ದ ಹೂವಿನ ಗಿಡಗಳಿಗೆ ಬೆಂಕಿ ಹಾಕಿ ಸುಟ್ಟು ಹಾಕಲಾಗಿದೆ.

ಹೆದ್ದಾರಿಯು ಸುಂದರವಾಗಿ ಕಾಣಲಿ ಎಂದು ಹೆದ್ದಾರಿಯ ಡಿವೈಡರ್‌ಗಳಲ್ಲಿ ವಿವಿಧ ಜಾತಿಯ ಹೂವಿನ ಗಿಡಗಳನ್ನು ಬೆಳೆಸಲಾಗಿತ್ತು. ಆ ಗಿಡಗಳನ್ನು ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಪ್ರಾಧಿಕಾರದ ಸಿಬ್ಬಂದಿ ನಿರ್ವಹಣೆ ಮಾಡಬೇಕಿತ್ತು. ಆದರೆ ಬೇಸಿಗೆಯಲ್ಲಿ ಈ ಗಿಡಗಳು ನೀರಿಲ್ಲದೆ ಒಣಗಿ ಹೋಗಿದ್ದು, ಬೆಂಕಿ ತಗುಲಿ ಸುಟ್ಟು ಹೋಗಿದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಹೆದ್ದಾರಿಯ ನಿರ್ವಹಣೆಗಾಗಿ ನಿತ್ಯ ಟೋಲ್ ಮೂಲಕ ಹಣ ಸಂಗ್ರಹಿಸಲಾಗುತ್ತದೆ. ಆದರೆ, ಹೆದ್ದಾರಿಯಲ್ಲಿನ ಗಿಡಗಳನ್ನೇ ರಕ್ಷಿಸಿಕೊಳ್ಳಲಾಗದ ಅಧಿಕಾರಿಗಳು ಇನ್ನು ಹೆದ್ದಾರಿಯನ್ನು ಹೇಗೆ ರಕ್ಷಿಸುತ್ತಾರೆ ಎಂಬ ಪ್ರಶ್ನೆ ಮೂಡಿದೆ. ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಹೆದ್ದಾರಿಯಲ್ಲಿನ ಹೂವಿನ ಗಿಡಗಳಿಗೆ ಬೆಂಕಿ ಹಾಕುವ ಬದಲು ನೀರು ಹಾಕಿ ಬೆಳೆಸಬೇಕಿದೆ. ಒಂದು ವೇಳೆ ಇದು ಕಿಡಿಗೇಡಿಗಳ ಕೃತ್ಯವಾಗಿದ್ದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಿದೆ.

-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

1 hour ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

1 hour ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

1 hour ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

1 hour ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

1 hour ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

1 hour ago