ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಭಾಷಣ ದೇಶದಲ್ಲಿ ಕೋಮು ದ್ವೇಷವನ್ನು ಹೆಚ್ಚು ಮಾಡಲು ಪ್ರಚೋಧಿಸುವಂತಿದೆ.
ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜರೋಹಣ ನೆರವೇರಿಸಿ ಮಾತನಾಡಿದ ಅವರು, ‘ದೇಶದಲ್ಲಿ ಸದ್ಯದಲ್ಲಿ ಜಾರಿಯಲ್ಲಿರುವ ನಾಗರಿಕ ಸಂಹಿತೆಯು ಕೋಮುವಾದ ಮತ್ತು ತಾರತಮ್ಯದಿಂದ ಕೂಡಿದ್ದು, ದೇಶವನ್ನು ಧರ್ಮದ ಆಧಾರದ ಮೇಲೆ ವಿಭಜಿಸಿದೆ. ಇಂತಹ ಸಂಹಿತೆಯೊಂದಿಗೆ ನಾವು ೭೫ ವರ್ಷಗಳ ಕಾಲ ಜೀವಿಸಿದ್ದು, ದೇಶಕ್ಕೆ ಜಾತ್ಯತೀತ ನಾಗರಿಕ ಸಂಹಿತೆ ತುರ್ತು’ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ದೇಶ ಸ್ವತಂತ್ರಗೊಂಡ ಬಳಿಕ ಡಾ.ಬಿ.ಆರ್.ಅಂಬೇಡ್ಕರ್‌ರವರು ರಚಿಸಿದ ಸಂವಿಧಾನದ ಕಾನೂನಿನಡಿ ಆಡಳಿತ ನಡೆಸಲಾಗುತ್ತಿದೆ. ಇಂತಹ ದೇಶದಲ್ಲಿ ಇಷ್ಟು ವರ್ಷಗಳ ಕಾಲ ಕೋಮುವಾದಿ ನಾಗರಿಕ ಸಂಹಿತೆ ಹೊಂದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿ ಹೇಳಿರುವುದು ಸಂವಿಧಾನ ಹಾಗೂ ಡಾ.ಬಿ.ಆರ್.ಅಂಬೇಡ್ಕರ್‌ರವರಿಗೆ ಅಪಮಾನ ಮಾಡಿದಂತಾಗಿದೆ. ಅಲ್ಲದೇ ದೇಶದ ಸೌರ್ಹದತೆಗೆ ಧಕ್ಕೆಯುಂಟು ಮಾಡಿದೆ.
ಪ್ರಸ್ತುತದ ನಾಗರಿಕ ಸಂಹಿತೆ ದೇಶದಲ್ಲಿ ಕೋಮುವಾದವನ್ನು ಬಿತ್ತುವುದಾದರೇ ಮೋದಿಯವರು ಜಾರಿ ಮಾಡಲು ಹೊರಟಿರುವ ಜ್ಯಾತ್ಯತೀತ ನಾಗರಿಕ ಸಂಹಿತೆ ಎಂದರೇನು? ಅದು ಏನನ್ನು ಸೂಚಿಸುತ್ತದೆ ಎಂಬುದರ ಬಗ್ಗೆ ಅವರೇ ವಿವರಣೆ ನೀಡಲಿ. ಭಾರತವನ್ನು ಸಂಪೂರ್ಣವಾಗಿ ಹಿಂದೂ ರಾಷ್ಟ್ರ ಮಾಡಬೇಕು ಎಂಬ ಪಣ ತೊಟ್ಟಿರುವ ನರೇಂದ್ರ ಮೋದಿಯವರಿಗೆ ಹಿಂದೂ ರಾಷ್ಟ್ರ ಮಾಡುವುದೇ ಜ್ಯಾತ್ಯಾತೀತ ಸಂಹಿತೆಯೇ? ಇದಕ್ಕೆ ಅವರು ಮೊದಲು ಉತ್ತರಿಸಲಿ.
-ಎಂ.ಸುರೇಶ್, ಸಿಂಧುವಳ್ಳಿ, ನಂಜನಗೂಡು ತಾ.
ಮಂಡ್ಯ: ಸಚಿವ ಎಚ್.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ…
ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು…
ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…