Andolana originals

ಓದುಗರ ಪತ್ರ| ಸಾಹಿತ್ಯ ಸಮ್ಮೇಳನಗಳ ಉದ್ದೇಶ ಈಡೇರಲಿ

ಈ ಬಾರಿ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂ.ಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಇಷ್ಟೊಂದು ಹಣ ವ್ಯಯಿಸಿ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಮಾಡುತ್ತಿದ್ದರೂ ಇದರಿಂದ ಕನ್ನಡ ಹಾಗೂ ಕನ್ನಡಿಗರಿಗೆ ಏನಾದರೂ ಉಪಯೋಗವಾಗುತ್ತಿದೆಯೇ ಎಂಬ ಪ್ರಶ್ನೆ ಮೂಡುತ್ತದೆ.

ರಾಜ್ಯದಲ್ಲಿ ಅನ್ಯ ಭಾಷಿಗರ ಹಾವಳಿ ಹೆಚ್ಚಾಗಿದೆ. ಅದರಲ್ಲಿಯೂ ಬೆಂಗಳೂರಿನಂತಹ ನಗರದಲ್ಲಿ ಅನ್ಯಭಾಷಿಗರೇ ಹೆಚ್ಚಾಗಿದ್ದು, ಕನ್ನಡದಲ್ಲಿ ನಾಮಫಲಕ ಅಳವಡಿಸಬೇಕು ಎಂಬುದಕ್ಕೂ ಹೋರಾಟಗಳನ್ನು ಮಾಡಬೇಕಾಗಿದೆ. ಪ್ರತಿ ಬಾರಿ ಸಮ್ಮೇಳನಗಳು ನಡೆದಾಗಲೂ ಕನ್ನಡ ಭಾಷೆಯ ಸಮೃದ್ಧಿಗಾಗಿ ಹೊಸ ಹೊಸ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ. ಅವುಗಳನ್ನು ಜನರಿಗೆ ತಲುಪಿಸಲು ಯೋಜನೆಗಳನ್ನು ರೂಪಿಸಿಕೊಳ್ಳಲಾಗುತ್ತದೆ. ಆದರೆ, ಅವು ಎಚ್ಚರಮಟ್ಟಿಗೆ ಕನ್ನಡಿಗರ ಮೇಲೆ ಪರಿಣಾಮ ಬೀರುತ್ತಿವೆಯೋ ತಿಳಿಯದು.

ಇತ್ತೀಚೆಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ವಿಚಾರದಲ್ಲಿಯೂ ಭಾರಿ ವಿರೋಧಗಳು ಕೇಳಿಬಂದಿದ್ದವು. ಹೀಗೆ ಅನ್ಯಭಾಷೆಗಳ ಹಾವಳಿಯ ನಡುವೆ ಕರ್ನಾಟಕದಲ್ಲಿಯೇ ಕನ್ನಡ ಭಾಷೆಯ ಉಳಿವಿಗಾಗಿ ಹೋರಾಡುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ನೂರಾರು ಕೋಟಿ ರೂ. ವ್ಯಯಿಸಿ ಮಾಡುವ ಇಂತಹ ಸಾಹಿತ್ಯ ಸಮ್ಮೇಳನಗಳಿಂದ ಕನ್ನಡನಾಡಿಗೆ ಏನಾದರೂ ಪ್ರಯೋಜನವಾಗು ವಂತಾಗಲಿ.

-ಜಾಕೀರ್ ಖಾನ್, ಸಾತಗಳ್ಳಿ, ಮೈಸೂರು.

AddThis Website Tools
ಆಂದೋಲನ ಡೆಸ್ಕ್

Recent Posts

ಮೈಸೂರು ಬಂದ್: ಮೈಸೂರು ವಕೀಲರ ಸಂಘ ಬೆಂಬಲ

ಮೈಸೂರು: ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಖಂಡಿಸಿ…

20 mins ago

ಮೈಸೂರು ಬಂದ್: ಮಾಜಿ ಶಾಸಕ ಸೋಮಶೇಖರ್‌ ಪ್ರತಿಕ್ರಿಯೆ

ಮೈಸೂರು: ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಖಂಡಿಸಿ…

48 mins ago

ಮೈಸೂರು ಬಂದ್: ನಗರ ಬಸ್‌ ನಿಲ್ದಾಣದಲ್ಲಿ ಬಸ್ಸಿಗಾಗಿ ಸಾರ್ವಜನಿಕರ ಪರದಾಟ

ಮೈಸೂರು: ಪ್ರಗತಿ ಪರ ಸಂಘಟನೆಗಳು ಮೈಸೂರು ಬಂದ್‌ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಾರಿಗೆ ಬಸ್‌ಗಳು ಬೆಂಬಲ ಸೂಚಿಸಿವೆ. ಹಾಗಾಗಿ…

1 hour ago

ಮೈಸೂರು ಬಂದ್‌: ಮಾರುಕಟ್ಟೆ, ಬಸ್ ನಿಲ್ದಾಣ ಖಾಲಿ ಖಾಲಿ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವಹೇಳನ ಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ…

2 hours ago

ಓದುಗರ ಪತ್ರ: ಅಸ್ಸಾದಿಯವರ ಸಾವು ದೇಶಕ್ಕೆ ತುಂಬಲಾರದ ನಷ್ಟ

ಮೈಸೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಮುಖ್ಯಸ್ಥರು ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೈಚಾರಿಕ ಚಿಂತನೆಯ ಉಪನ್ಯಾಸವನ್ನು ನೀಡುವುದರ ಮೂಲಕ ಪ್ರಖ್ಯಾತಿ…

4 hours ago

ಸಮ್ಮೇಳನದಲ್ಲಿ ಕಂಡ ಮುಖಗಳು

ಕೀರ್ತಿ ಸಾಹಿತ್ಯ ಸಮ್ಮೇಳನದ ಮೂರೂ ದಿನಗಳು ಇವರನ್ನು ಭೇಟಿಯಾಗುತ್ತಲೇ ಇದ್ದೆ. ತಿಂದವರ ಊಟದ ಎಲೆಗಳನ್ನು ತೆಗೆಯುತ್ತಾ, ತಮಿಳು ಭಾಷೆಯಲ್ಲಿ ಮಾತಾಡಿಕೊಳ್ಳುತ್ತಿದ್ದರು.…

4 hours ago