Mysore
23
overcast clouds

Social Media

ಶನಿವಾರ, 23 ಮೇ 2026
Light
Dark

ಓದುಗರ ಪತ್ರ: ಸಾರಿಗೆ ಬಸ್ಸುಗಳು ಸಕಾಲಕ್ಕೆ ನಿಗದಿತ ಸ್ಥಳ ತಲುಪಲಿ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ ಮಿತಿಮೀರಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದು, ಸಕಾಲಕ್ಕೆ ಗಮ್ಯ ಸ್ಥಳವನ್ನು ತಲುಪದೇ ಇರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಉದ್ಯೋಗಕ್ಕೆ ತೆರಳುವವರಿಗೆ ತೀವ್ರ ತೊಂದರೆಯಾಗಿದೆ.ನಿರ್ವಾಹಕರು ನಿಲ್ದಾಣವಲ್ಲದ ಸ್ಥಳಗಳಲ್ಲಿ ಟಿಕೆಟ್ ನೀಡಲು ಬಸ್‌ಗಳನ್ನು ನಿಲ್ಲಿಸಿಕೊಳ್ಳುವುದರಿಂದ ಸಮಯ ವ್ಯರ್ಥವಾಗುತ್ತಿದೆ. ಸಂಬಂಧಪಟ್ಟವರು ಪ್ರಯಾಣಿಕರ ಅಗತ್ಯಕ್ಕೆ ಅನುಗುಣವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ನಗರ ಸಾರಿಗೆ ಬಸ್‌ಗಳ ಸೌಲಭ್ಯ ಕಲ್ಪಿಸಬೇಕು. ಬಸ್‌ಗಳಲ್ಲಿ ಆಸನಗಳಿರುವಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ ನೀಡುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.

 -ನಾಗೇಶ್, ಮಾನಸಗಂಗೋತ್ರಿ, ಮೈಸೂರು

 

Tags:
error: Content is protected !!