ಓದುಗರ ಪತ್ರ
ಮೈಸೂರಿನ ಮುಖ್ಯ ಅಂಚೆ ಕಚೇರಿಯ ಸ್ಪೀಡ್‌ಪೋಸ್ಟ್ ವಿಭಾಗದಲ್ಲಿರುವ ಕೆಲವು ಸಿಬ್ಬಂದಿ ಗ್ರಾಹಕರೊಂದಿಗೆ ಸರಿಯಾಗಿ ಸ್ಪಂದಿಸದೆ ಬೇಜವಾಬ್ದಾರಿ ತೋರುತ್ತಿದ್ದಾರೆ. ಕೆಲವು ಕೌಂಟರ್‌ಗಳಲ್ಲಿ ಸಿಬ್ಬಂದಿ ಕೆಲಸಕ್ಕೆ ತಡವಾಗಿ ಹಾಜರಾಗುವುದಲ್ಲದೆ, ಕೆಲಸಕ್ಕೆ ಹಾಜರಾದ ಮೇಲೂ ತಮ್ಮ ವೈಯಕ್ತಿಕ ಕೆಲಸಗಳನ್ನು ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತಿರುವ ಗ್ರಾಹಕರನ್ನೂ ಲೆಕ್ಕಿಸದೆ ತಮ್ಮ ವೈಯಕ್ತಿಕ ಕೆಲಸಗಳನ್ನು ಮುಗಿಸಿ ನಂತರ ಗ್ರಾಹಕರ ಬಳಿಗೆ ಸಿಬ್ಬಂದಿ ಬರುತ್ತಾರೆ. ಇದನ್ನು ಪ್ರಶ್ನಿಸುವ ಗ್ರಾಹಕರೊಂದಿಗೆ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಅಲ್ಲದೆ ಕಚೇರಿಯ ಕೆಲಸಗಳಿವೆ ಎಂದು ಸಬೂಬು ನೀಡುತ್ತಾರೆ. ಮೊಬೈಲ್ ನೋಡಿಕೊಂಡು ಕಾಲಹರಣ ಮಾಡುತ್ತಾರೆ. ಹೀಗಾದರೆ ಸರತಿ ಸಾಲಿನಲ್ಲಿ ಕಾದು ನಿಲ್ಲುವ ಗ್ರಾಹಕರ ಪಾಡು ಏನಾಗಬೇಕು? ತಾವು ಇರುವುದು ಸಾರ್ವಜನಿಕ ಸೇವೆಗಾಗಿ ಎಂಬುದನ್ನೇ ಮರೆತು ಬೇಜವಾಬ್ದಾರಿ ತೋರುವ ಇಂತಹ ಸಿಬ್ಬಂದಿಯ ವಿರುದ್ಧ ಸರ್ಕಾರ ಕ್ರಮ ಕೈಗೊಂಡು, ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚಿಸಲಿ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…