ಓದುಗರ ಪತ್ರ
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿರುವುದು ನಾಚಿಕೆಗೇಡಿನ ವಿಷಯ. ಇನ್ನೂ ಒಳಹೊಕ್ಕು ನೋಡಿದರೆ ಕನ್ನಡಿಗರಿಗೂ ಅವಮಾನ ಮಾಡಿದ ಹಾಗಿದೆ.
ಈ ಘಟನೆ ೨೧ನೇ ಶತಮಾನದಲ್ಲಿ, ಅದೂ ಪ್ರಜಪ್ರಭುತ್ವದ ಭಾರತದಲ್ಲಿ ಇನ್ನೂ ಜೀವಂತವಾಗಿರುವ ಅಸ್ಪೃಶ್ಯತೆಯ ಅಮಾನುಶ ಕೃತ್ಯದ ಮುಖವನ್ನು ಬಯಲು ಮಾಡಿದೆ. ದಲಿತ ನಾಯಕರು ಉನ್ನತದ ಹುದ್ದೆಗೆ ಏರಿದಾಗಲೇ ಜತಿ ತಾರತಮ್ಯ, ದೌರ್ಜನ್ಯ ನಡೆಯುತ್ತಿರುವುದು ಅಸಹನೀಯವಾಗಿದೆ.
ಈ ರೀತಿಯ ಘಟನೆಗೆ ಕಾರಣರಾದವರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ ದಾಖಲು ಮಾಡಿದರೆ ಮುಂದೆ ಇಂತಹ ಘಟನೆಗಳು ನಡೆಯಲು ಆಸ್ಪದ ಇರುವುದಿಲ್ಲ. ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣ ಲೇಸಲ್ಲವೇ?
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್. ಡಿ.ಕೋಟೆ ತಾಲ್ಲೂಕು
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…