Andolana originals

ಓದುಗರ ಪತ್ರ| ರಾಜ್ಯದ ಹಿತಕ್ಕಾಗಿ ಎಲ್ಲರೂ ಒಂದಾಗಿ ಹೋರಾಡಿ

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾಗಿಯಾಗಿ ತಮ್ಮ ಪಕ್ಷದ ನಿಲುವನ್ನು ಪ್ರಸ್ತಾಪಿಸಬಹುದಿತ್ತು. ಆದರೆ ಅವರು ಸಭೆಯಲ್ಲಿ ಭಾಗಿಯಾಗದೆ ಮಾಧ್ಯಮಗಳ ಮುಂದೆ ‘ನಾನು ಗೋಡಂಬಿ, ದ್ರಾಕ್ಷಿತಿನ್ನಲುಸಭೆಗೆ ಹೋಗಬೇಕಿತ್ತಾ?’ ಎಂದು ವ್ಯಂಗ್ಯವಾಡಿರುವುದು ಸಮಂಜಸವಲ್ಲ. ನೆಲ, ಜಲ, ಭಾಷೆಯ ವಿಚಾರದಲ್ಲಿ ಧಕ್ಕೆಯಾದಾಗ ರಾಜ್ಯದ ಹಿತ ಕಾಯಲು ಎಲ್ಲ ರಾಜಕೀಯ ಪಕ್ಷಗಳ ನಾಯಕರೂ ಒಟ್ಟಾಗಿ ಶ್ರಮಿಸಬೇಕು.

ಹಿಂದೆ ಕೇಂದ್ರದಲ್ಲಿ ಸಚಿವರಾಗಿದ್ದ ಅನಂತ ಕುಮಾರ್‌ ಅವರು ಕಾವೇರಿ ನೀರಿನ ವಿಚಾರ ಬಂದಾಗ ಪಕ್ಷ ಭೇದ ಮರೆತು ರಾಜ್ಯದ ಹಿತಾಸಕ್ತಿಗಾಗಿ ಮುತುವರ್ಜಿ ವಹಿಸಿದ್ದರು. ಅವರಂತೆ ಅನೇಕ ನಾಯಕರು ರಾಜ್ಯದ ಹಿತಕ್ಕಾಗಿ ಒಟ್ಟಾಗಿ ಶ್ರಮಿಸಿದ್ದಾರೆ. ಆದ್ದರಿಂದ ಈಗಿರುವ ನಾಯಕರೂ ಅವರಂತೆಯೇ ಒಂದಾಗಿ ಹೋರಾಡಬೇಕೇ ವಿನಾ ಪಕ್ಷಭೇದ ಮಾಡಿಕೊಂಡು ಪಲಾಯನ ಮಾಡಬಾರದು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

8 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago