ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಭಾರತ ಸಂವಿಧಾನದ ಶಿಲ್ಪಿ ಅರ್ಥಶಾಸ್ತ್ರಜ್ಞ, ಸಮಾಜ ಸುಧಾರಕ, ತತ್ವಜ್ಞಾನಿ, ಇತಿಹಾಸಕಾರ ಎನ್ನುತ್ತೇವೆ. ಅವರು ಸಮಾನತೆ, ಮತದಾನದ ಹಕ್ಕು, ಮೀಸಲಾತಿಯನ್ನು ಒದಗಿಸುವ ಮೂಲಕ ಹಿಂದುಳಿದ ವರ್ಗದವರ ಪಾಲಿಗೆ ಬೆಳಕಾದ ಮಹಾಚೇತನ. ಅವರ ಜನ್ಮದಿನವನ್ನು ವಿಶ್ವಸಂಸ್ಥೆ ಜ್ಞಾನದ ದಿನವನ್ನಾಗಿ ಆಚರಿಸುತ್ತದೆ. ಡಾ.ಅಂಬೇಡ್ಕರ್ ಅವರ ಚಿಂತನೆಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿ ಕೊಂಡು ಮತ್ತಷ್ಟು ವಿಸ್ತಾರಗೊಳ್ಳುವ ಮೂಲಕ ಅವರು ತೋರಿದ ಮಾರ್ಗದಲ್ಲಿ ಸಾಗೋಣ
– ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು





