ಮಕ್ಕಳು ಹಾಗೂ ಸಾರ್ವಜನಿಕರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸಲು ಪ್ರತಿಯೊಂದು ಶಾಲಾ ಕಾಲೇಜುಗಳ ಮುಂದೆ, ಬಸ್ ನಿಲ್ದಾಣ, ರೈಲು ನಿಲ್ದಾಣ, ದೇವಸ್ಥಾನ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಸಂಚಾರ ಗ್ರಂಥಾಲಯ ಚಾಲನೆಯಲ್ಲಿದ್ದರೆ ಒಳ್ಳೆಯದು.
ವಾರಕ್ಕೆ ಮೂರು ದಿನ ಆದರೂ ಪ್ರತಿಯೊಂದು ಸಂಚಾರ ಗ್ರಂಥಾಲಯವೂ ಚಾಲನೆಯಲ್ಲಿರಬೇಕು. ಇದರಿಂದ ಸಾರ್ವಜನಿಕರಲ್ಲಿ ಓದುವ ಹವ್ಯಾಸ ಬೆಳೆಯುತ್ತದೆ. ಸಂಚಾರ ಗ್ರಂಥಾಲಯಗಳಲ್ಲಿ ಮಕ್ಕಳಿಗೆ ಅಗತ್ಯವಾದ ಎಲ್ಲಾ ಬಗೆಯ ಪುಸ್ತಕಗಳನ್ನು ಇಡುವುದರಿಂದ ಮಕ್ಕಳಲ್ಲಿ ಜ್ಞಾನಾರ್ಜನೆ ಹೆಚ್ಚಾಗಿ ಮೊಬೈಲ್ ಗೀಳಿನಿಂದ ಹೊರ ತರಬಹುದಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಗ್ರಂಥಾಲಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ.
-ಎಂ. ಎಸ್. ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು





