Mysore
19
overcast clouds
Light
Dark

ಓದುಗರ ಪತ್ರ: ಪ್ರಜಾಪ್ರಭುತ್ವ ದಿನಕ್ಕೆ ಕೈ ಜೋಡಿಸೋಣ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರಿಂದ ಆಯ್ಕೆಯಾದ ಜನಪ್ರತಿನಿಽಗಳು ಪ್ರಜೆಗಳ ಹಿತಾಸಕ್ತಿಯನ್ನು ಕಾಪಾಡುವ ಹೊಣೆಗಾರಿಕೆ ಹೊಂದಿರಬೇಕು. ಯಾವುದೇ ಸರ್ಕಾರವಾಗಿರಲಿ ಡಾ. ಬಿ. ಆರ್. ಅಂಬೇಡ್ಕರ್‌ರವರ ಸಂವಿಧಾನದಡಿ ಆಡಳಿತ ನಡೆಸುವ ಜತೆಗೆ ಪ್ರಜಾಪ್ರಭುತ್ವದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಆ ಸರ್ಕಾರದ ಕರ್ತವ್ಯ ವಾಗಿರುತ್ತದೆ. ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಹಲವು ಕಾರ್ಯಕ್ರಮಗಳ ಮೂಲಕ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.

ಈಗಾಗಲೇ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಿರುವ ಸರ್ಕಾರವು ಈಗ ಒಂದು ಹೆಜ್ಜೆ ಮುಂದೆ ಹೋಗಿ ಸೆಪ್ಟೆಂಬರ್ ೧೫ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸುವ ಜತೆಗೆ ಬೀದರ್‌ನಿಂದ ದಕ್ಷಿಣದ ಚಾಮರಾಜನಗರದವರೆಗೆ ಸುಮಾರು 25 ಲಕ್ಷಕ್ಕೂ ಹೆಚ್ಚು ಜನರನ್ನು ಒಳಗೊಂಡಂತೆ ಮಾನವ ಸರಪಳಿ ರಚಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಮೆಚ್ಚುಗೆಯ ವಿಷಯವಾಗಿದೆ. ಈ ಕಾರ್ಯಕ್ರಮದಲ್ಲಿ ನಾವೂ ಭಾಗವಹಿಸಿ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕಿದೆ. ಆ ಮೂಲಕ ಪ್ರಜಾಪ್ರಭುತ್ವ ದಿನಾಚರಣೆಯನ್ನು ಯಶಸ್ವಿಗೊಳಿಸಬೇಕಿದೆ. -ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.