Andolana originals

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ ಬದಿಯ ಅಂಗಡಿಗಳಿಗೆ ಹೋದಾಗ ವಾಹನ ನಿಲ್ಲಿಸಲು ಒಂದು ಮರದ ನೆರಳಿಗಾಗಿ ಹುಡುಕಾಡಬೇಕಾದ ಪರಿಸ್ಥಿತಿ ಇದೆ. ಅಪ್ಪಿತಪ್ಪಿ ಬಿಸಿಲಿನಲ್ಲಿ ಬೈಕ್ ಅಥವಾ ಸ್ಕೂಟರ್‌ಗಳನ್ನು ನಿಲ್ಲಿಸಿದರೆ ಸೀಟುಗಳು ಕಾದ ಹೆಂಚಿನಂತಾಗಿ, ಅದರ ಮೇಲೆ ಕುಳಿತುಕೊಳ್ಳಲು ಸಾಧ್ಯವಾಗುವುದಿಲ್ಲ.

ಬಿಸಿಲಿನ ತಾಪಕ್ಕೆ ನಮ್ಮ ಚರ್ಮದ ಬಣ್ಣವೂ ಕಪ್ಪಾಗುತ್ತಿದೆ. ನಾವು ಇಂದು ನೆರಳಿನಲ್ಲಿ ನಿಂತು ಉಸಿರಾಡುತ್ತಿದ್ದೇವೆ ಎಂದರೆ, ಅದಕ್ಕೆ ಅಂದು ಯಾರೋ ಹಿರಿಯರು ನೆಟ್ಟು ಬೆಳೆಸಿದ ಮರಗಳೇ ಕಾರಣ. ಆದರೆ ಇಂದು ನಾವು ಯಾರೋ ಗಿಡ ನೆಡುತ್ತಾರೆ, ಸರ್ಕಾರ ನೋಡಿಕೊಳ್ಳುತ್ತದೆ ಎಂದು ಗಿಡ ನೆಟ್ಟು ಪರಿಸರ ಉಳಿಸುವ ಕರ್ತವ್ಯ ಮರೆತರೆ ಮುಂದಿನ ಪೀಳಿಗೆಗೆ ಕೇವಲ ಕಾಂಕ್ರೀಟ್ ಕಾಡು ಮಾತ್ರ ಉಳಿಯುತ್ತದೆ.

ಈ ಪರಿಸ್ಥಿತಿ ಬದಲಾಗಬೇಕಾದರೆ ಪ್ರತಿಯೊಬ್ಬರೂ ಸೂಕ್ತವಾದ ಜಾಗದಲ್ಲಿ ಕನಿಷ್ಠ ಒಂದೊಂದು ಗಿಡವನ್ನುನೆಟ್ಟು ಜವಾಬ್ದಾರಿಯಿಂದ ಪೋಷಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ನಮಗೂ ನೆರಳು ಸಿಗುತ್ತದೆ, ನಮ್ಮ ಮಕ್ಕಳ ಭವಿಷ್ಯಕ್ಕೂ ದಾರಿಯಾಗುತ್ತದೆ. ಪ್ರಕೃತಿಯನ್ನು ರಕ್ಷಿಸುವ ಈ ಕಾರ್ಯ ನಮ್ಮಿಂದಲೇ ಶುರುವಾಗಲಿ.

-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

9 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

10 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

11 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

11 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

11 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

14 hours ago