Mysore
18
clear sky

Social Media

ಶನಿವಾರ, 03 ಜನವರಿ 2026
Light
Dark

ಓದುಗರ ಪತ್ರ: ಡಿಜಿಟಲ್ ತಂತ್ರಜ್ಞಾನ ಸದ್ಬಳಕೆಯಾಗಲಿ

ಓದುಗರ ಪತ್ರ

ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ ಚಾನಲ್‌ಗಳು, ಇ-ಪುಸ್ತಕಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಸಾಮಗ್ರಿಗಳು ನಗರ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸುಲಭವಾಗಿ ಲಭ್ಯವಾಗಿದ್ದು, ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯವಾಗಿದೆ.

ಈ ತಂತ್ರಜ್ಞಾನದಿಂದ ಸಾವಿರಾರು ಜನ ಯುವಕರು ಸ್ವ ಉದ್ಯೋಗದಿಂದ ಸ್ವಾವಲಂಬಿಗಳಾಗುತ್ತಿದ್ದಾರೆ. ಆದರೆ ಯುವಕರು ಹೆಚ್ಚು ಸಮಯ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಕಳೆಯುತ್ತಿರುವುದರಿಂದ ತಲೆನೋವು, ನಿದ್ರಾಹೀನತೆ, ಮಾನಸಿಕ ಒತ್ತಡದಿಂದ ಬಳಲುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳನ್ನು ಪರಾಮರ್ಶಿಸದೆ ಸತ್ಯಾಸತ್ಯತೆಯನ್ನು ಪರಿಶೀಲಿಸದೆ ಪ್ರತಿಕ್ರಿಯಿಸುವುದರಿಂದ ಅನೇಕ ಅನವಶ್ಯಕ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಯುವಕರು ಸಮಯ ಮಿತಿಯಲ್ಲಿ ಮೊಬೈಲ್ ಬಳಕೆ ಮಾಡಬೇಕು. ಶಿಕ್ಷಣ ಮತ್ತು ಜ್ಞಾನಾರ್ಜನೆಗೆ ಡಿಜಿಟಲ್ ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು.

– ಎನ್.ಎಚ್.ಮನೋಜ್, ಪತ್ರಿಕೋದ್ಯಮ ಮತ್ತು ಸಂವಹನ ಸಮೂಹ ವಿಭಾಗ,ಮಾನಸ ಗಂಗೋತ್ರಿ, ಮೈಸೂರು

Tags:
error: Content is protected !!