Andolana originals

ಓದುಗರ ಪತ್ರ: ಸಂತ್ರಸ್ತೆಯರ ಅಳಲಿಗೆ ಕಿವಿಯಾಗೋಣ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯ ಬಗ್ಗೆ ಕುಹಕಗಳು ಕೇಳಿಬರುತ್ತಿವೆ. ಅದು ಸಲ್ಲದು. ಸಂತ್ರಸ್ತೆಯರು ಬಲವಂತವಾಗಿ ಪ್ರಜ್ವಲ್ ಅವರಿಂದ ಲೈಂಗಿಕ ದೌರ್ಜನ್ಯ ಅನುಭವಿಸಿರಬಹುದು. ಅಥವಾ ಹಲವು ಚಪಲಕೋರರ ಅನಿಸಿಕೆಯಂತೆ ವಿಲಾಸಿ ಜೀವನಕ್ಕಾಗಿಯೇ ಜೀವನ ಹಾಳು ಮಾಡಿಕೊಂಡಿರಬಹುದು. ಈ ಎಲ್ಲದರ ಹಿಂದೆ ಪುರುಷನೊಬ್ಬನ ಪೈಶಾಚಿಕತೆ ಇದೆ ಎಂಬುದು ಸಾಬೀತಾಗಿದೆ. ಅಲ್ಲದೆ, ಅಶ್ಲೀಲ ಪೆನ್‌ಡೈವ್‌ನ್ನು ವಿಡಿಯೋ ಮೂಲಕ ಹರಿಯಬಿಟ್ಟವರು ಕೂಡ ಪುರುಷರೇ ಆಗಿರುತ್ತಾರೆ. ಸೇಡು, ಚಪಲ, ಕಳ್ಳದಂಧೆಗೆ ರಕ್ಷಣೆ ಇತ್ಯಾದಿ ಯಾವುದೇ ದುರುದ್ದೇಶ ಇರಬಹುದು. ಅದರಿಂದ ಅವಮಾನ, ಅಪಹಾಸ್ಯಕ್ಕೆ ಗುರಿಯಾಗುವುದು ಸಂತ್ರಸ್ತೆಯರೇ ಎಂಬ ಸಣ್ಣ ಮಾನವೀಯ ಗುಣವೂ ಇಲ್ಲದ ಈ ಪುರುಷರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯೇ ಕಾಣುತ್ತಿಲ್ಲ. ಈ ಸಂದರ್ಭದಲ್ಲಿ ಅಂತಃಕರಣದ ಮನಸ್ಸುಗಳು ಸಂತ್ರಸ್ತೆಯ ಬಗ್ಗೆ ಅನುಕಂಪ, ಆದರಗಳಿಂದ ಮಾತನಾಡಬೇಕಿದೆ. ಇದರಿಂದ ಮಾನಸಿಕವಾಗಿ, ದೈಹಿಕವಾಗಿ ಘಾಸಿಯಾಗಿರುವ ಸಂತ್ರಸ್ತೆಯರಿಗೆ ಮನೋಸ್ಥೈರ್ಯ ಲಭಿಸುತ್ತದೆ. ಆಗ ಅವರು ಸ್ವಯಂಪ್ರೇರಿತವಾಗಿ ತಮ್ಮ ಮೇಲೆ ದೌರ್ಜನ್ಯ ನಡೆಸಿದ ವ್ಯಕ್ತಿಯ ವಿರುದ್ಧ ನ್ಯಾಯಕ್ಕಾಗಿ ಹೋರಾಟಕ್ಕೆ ಇಳಿಯಬಹುದು. ಅಂತಹ ಆಶಯ ನಮ್ಮೊಳಗೆ ಸದಾ ಜಾಗೃತವಾಗಿರುವುದು ಈ ಪ್ರಕರಣದ ಸಂದರ್ಭದಲ್ಲಿ ಅತ್ಯಂತ ಅಗತ್ಯ.

-ಎಸ್.ಎಂ.ಜಯಂತಿ, ಸರಸ್ವತಿಪುರಂ, ಮೈಸೂರು.

andolana

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

6 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

9 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

9 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

9 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

10 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

10 hours ago