Andolana originals

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ ಎರಡು ಸ್ಥಾನಗಳನ್ನು ಗಳಿಸಿದೆ. ಜಾ.ದಳ ಅಭ್ಯರ್ಥಿ ಪರಾಭವಗೊಂಡಿದ್ದಾರೆ. ಈ ಚುನಾವಣೆಯಲ್ಲಿ ಕೆಲವು ಬಿಜೆಪಿ ಹಾಗೂ ಜಾ.ದಳ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಇದರ ಬಗ್ಗೆ ಅಂತರಿಕ ತನಿಖೆ ನಡೆಸಲಾಗುತ್ತದೆ ಎಂದು ಬಿಜೆಪಿ ಹೇಳಿಕೊಂಡಿದೆ. ಪ್ರತಿಬಾರಿ ವಿಧಾನ ಪರಿಷತ್ತಿನ ಚುನಾವಣೆ ನಡೆದಾಗಲೂ ಇಂತಹ ಆರೋಪ- ಪ್ರತ್ಯಾರೋಪ ಕೇಳಿ ಬರುತ್ತಲೇ ಇರುತ್ತದೆ. ಕೆಲವು ವರ್ಷಗಳ ಹಿಂದೆ ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರು, ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಅಭ್ಯರ್ಥಿ ಗೆಲ್ಲಲು ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಬೇಕು ಎಂಬ ಸೋಟಕ ಹೇಳಿಕೆ ನೀಡಿದ್ದರು.

ಹೀಗಾಗಿಯೇ ರಾಜಕೀಯ ಪಕ್ಷಗಳು ಹೆಚ್ಚಾಗಿ ಕೋಟ್ಯಂತರ ರೂಪಾಯಿಗಳ ಕುಳಗಳನ್ನೇ ಅಭ್ಯರ್ಥಿಗಳನ್ನಾಗಿ ನಿಲ್ಲಿಸುವ ಪರಿಪಾಠ ಹೊಂದಿವೆ. ವಿಧಾನ ಪರಿಷತ್ತು ಹಿರಿಯರ ಮನೆ ಎಂಬ ಗೌರವಕ್ಕೆ ಪಾತ್ರವಾಗಿದೆ. ಅಲ್ಲಿನ ಸದಸ್ಯರು ಹೆಚ್ಚು ಪ್ರeವಂತರು ಹಾಗೂ ಜನಪರ ಕಾಳಜಿಯುಳ್ಳವಂತಹವರು ಎಂದು ಕೂಡ ವ್ಯಾಖ್ಯಾನಿಸಲಾಗುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ವಿಧಾನ ಪರಿಷತ್ತಿನ ಮಹತ್ವ ಕುಗ್ಗುತ್ತಿದೆಯೇನೋ ಎಂಬ ಭಾವನೆ ಜನಸಾಮಾನ್ಯರಲ್ಲಿ ಮೂಡುತ್ತಿದೆ. ಆಂಧ್ರಪ್ರದೇಶ ಸೇರಿದಂತೆ, ಅನೇಕ ರಾಜ್ಯಗಳಲ್ಲಿ ವಿಧಾನ ಪರಿಷತ್ತನ್ನೇ ರದ್ದುಗೊಳಿಸಲಾಗಿದೆ.

ದೇಶದ ಬೆರಳೆಣಿಕೆಯಷ್ಟು ರಾಜ್ಯಗಳಲ್ಲಿ ಮಾತ್ರ ವಿಧಾನ ಪರಿಷತ್ತು ಅಸ್ತಿತ್ವದಲ್ಲಿದೆ. ಅದೇನೇ ಇರಲಿ, ಈಗ ವಿಜೇತರಾಗಿರುವ ಸದಸ್ಯರು, ಈ ಸದನದ ಘನತೆ ಮತ್ತು ಗಾಂಭಿರ್ಯವನ್ನು ಹೆಚ್ಚಿಸುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಾರೆ ಎಂದು ಆಶಿಸೋಣ.

-ಕೆ.ವಿ.ವಾಸು, ಮೈಸೂರು

ಆಂದೋಲನ ಡೆಸ್ಕ್

Recent Posts

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

3 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

3 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

4 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

4 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

4 hours ago