ಓದುಗರ ಪತ್ರ
ಹನೂರು ತಾಲ್ಲೂಕಿನ ರಾಮಾಪುರ ಪಂಚಾಯಿತಿ ವ್ಯಾಪ್ತಿಯ ಪಳನಿಮೇಡು ಗ್ರಾಮದ ಮಕ್ಕಳು ರಾಮಾಪುರ ಹೋಬಳಿಯ ಎಲ್ಲಾ ಕೆರೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದು ಶ್ಲಾಘನೀಯ.
ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ಕೃಷಿ ಚಟುವಟಿಕೆಗಳು ಸರಿಯಾಗಿ ನಡೆಯದೆ, ಜನರು ಬೇಸಾಯ ಬಿಟ್ಟು ಉದ್ಯೋಗಕ್ಕಾಗಿ ವಲಸೆ ಹೋಗುತ್ತಿದ್ದು, ಅವರ ಸ್ಥಿತಿಯನ್ನು ಕಂಡ ಗ್ರಾಮದ ಮಕ್ಕಳು, ಕೆರೆಗಳಿಗೆ ನೀರು ತುಂಬಿಸಿ ಎಂದು ಮುಖ್ಯಮಂತ್ರಿಗಳಿಗೆ ನೇರವಾಗಿ ಪತ್ರ ಬರೆದು ಗಮನ ಸೆಳೆದಿದ್ದಾರೆ. ಮುಖ್ಯಮಂತ್ರಿಗಳು ಮಕ್ಕಳ ಈ ಪತ್ರಕ್ಕೆ ಸ್ಪಂದಿಸಿ ಕೆರೆ, ಕಟ್ಟೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…