Andolana originals

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಕೇವಲ ೯೦ ಗ್ರಂಥಪಾಲಕರಿದ್ದರೆ ಗುಣಮಟ್ಟದ ಶಿಕ್ಷಣ ನೀಡಲು ಹೇಗೆ ಸಾಧ್ಯ? eನಾಧಾರಿತ ಸಮಾಜ ನಿರ್ಮಿಸುತ್ತೇವೆ ಎಂದು ಹೇಳಿಕೊಳ್ಳುವ ಆಡಳಿತಗಾರರು ಲೈಬ್ರರಿ ಸೈನ್ಸ್ ಪದವೀಧರರ ವಯೋಮಿತಿ ಮೀರುತ್ತಿದ್ದರೂ ಕಣ್ಣು ಮುಚ್ಚಿ ಕುಳಿತಿರುವುದು ಶೋಚನೀಯ.

ಉನ್ನತ ಶಿಕ್ಷಣ ಹಾಗೂ ವಿಶ್ವವಿದ್ಯಾಲಯಗಳ ಗ್ರಂಥಾಲಯಗಳು ಇಂದು ಜ್ಞಾನಕೇಂದ್ರಗಳಾಗದೆ ಬರಿ ದೂಳು ತಿನ್ನುವ ಕೊಠಡಿಗಳಾಗಿವೆ. ಶೈಕ್ಷಣಿಕ ವ್ಯವಸ್ಥೆಯ ಬೆನ್ನೆಲುಬಾದ ಗ್ರಂಥಾಲಯಗಳನ್ನು ದಷ್ಟಪುಷ್ಟಗೊಳಿಸದೆ, ಗುತ್ತಿಗೆ ಆಧಾರದ ಶೋಷಣೆ ಮುಂದುವರಿಸುವುದು ಖಂಡನೀಯ.

ಯುಜಿಸಿ ಮತ್ತು ಎಐಸಿಟಿಇ ಮಾನದಂಡಗಳಂತೆ ಸರ್ಕಾರ ತಕ್ಷಣವೇ ಶಾಶ್ವತ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ಅಕ್ಷರ ದೇಗುಲಗಳನ್ನು ಅನಾಥಗೊಳಿಸಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಟವಾಡುವುದನ್ನು ಸರ್ಕಾರ ತಕ್ಷಣವೇ ನಿಲ್ಲಿಸಬೇಕು.

ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

 

ಆಂದೋಲನ ಡೆಸ್ಕ್

Recent Posts

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

6 mins ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

8 hours ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯಾಗಲಿ

ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲ್ಲೂಕು ವನಸಿರಿ ನಾಡು ಎಂದೇ ಪ್ರಸಿದ್ಧಿ ಪಡೆದಿದೆ. ಹಾಗೆ ಹಲವು ದೇವಾಲಯಗಳ ಬೀಡು, ಈ…

8 hours ago

ಓದುಗರ ಪತ್ರ: ಹಳೆ ಪಿಂಚಣಿ ಮರುಜಾರಿಯಿಂದ ಖಜಾನೆಗೆ ಭಾರ ಆಗದೇ?

ಚುನಾವಣಾ ಲಾಭಕ್ಕಾಗಿ ಹಳೆ ಪಿಂಚಣಿ ಯೋಜನೆ ಮರುಜರಿಗೆ ಹೊರಟಿರುವುದು ರಾಜ್ಯದ ಆರ್ಥಿಕ ಪರಿಸ್ಥಿತಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ೩.೫…

8 hours ago

ಓದುಗರ ಪತ್ರ: ದಸರಾ ಚಲನಚಿತ್ರೋತ್ಸವ ಕೈಬಿಡಬಾರದು

ಮೈಸೂರಿನ ದಸರಾ ಚಲನಚಿತ್ರೋತ್ಸವವನ್ನು ಕಳೆದ ಸುಮಾರು ೫೦ ವರ್ಷಗಳಿಂದಲೂ ನಡೆಸಿಕೊಂಡು ಬರಲಾಗುತ್ತಿದೆ. ಪ್ರೇಕ್ಷಕರ ಭಾಗವಹಿಸುವಿಕೆ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಈ…

8 hours ago

ವರ್ಷದಲ್ಲಿ 180 ದ್ವಿಚಕ್ರ ವಾಹನಗಳ ಕಳ್ಳತನ!

ಎಚ್.ಎಸ್.ದಿನೇಶ್ ಕುಮಾರ್ ವರ್ಷದಿಂದೀಚೆಗೆ ೯೬ ವಾಹನಗಳ ಪತ್ತೆ; ೧೦ಕ್ಕೂ ಹೆಚ್ಚು ಆರೋಪಿಗಳ ಬಂಧನ ವಾಹನ ಸವಾರರಿಗೆ ಮುನ್ನೆಚ್ಚರಿಕೆ * ವಾಹನ…

8 hours ago