ಓದುಗರ ಪತ್ರ
ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸಿಗದೆ ಆಟೋ ಚಾಲಕರ ಜೀವನ ನಿರ್ವಹಣೆ ಕಷ್ಟವಾಗಿದೆ. ದಿನಗಟ್ಟಲೆ ಕಾದರೂ ಜೀವನದ ನಿರ್ವಹಣೆಗೆ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ. ಕೊರೋನ ಸಂದರ್ಭಕ್ಕಿಂತ ಈ ಯುದ್ಧದ ಸಂದರ್ಭ ಸಾರ್ವಜನಿಕರನ್ನು ಕಂಗೆಡಿಸಿದೆ. ಆಟೋ ಚಾಲಕರು, ಕಾರ್ಮಿಕರ ಬದುಕು ಬೀದಿಗೆ ಬಿದ್ದಿದೆ. ಯುದ್ಧದ ಪರಿಣಾಮ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಕೆಲ ಕುಟುಂಬದಲ್ಲಿ ಒಂದು ಹೊತ್ತಿನ ಊಟಕ್ಕೂ ತೊಂದರೆಯಾಗಿದೆ. ಮಕ್ಕಳ ವಿದ್ಯಾಭ್ಯಾಸ, ಜೀವನ ನಿರ್ವಹಣೆಗೆ ಏನು ಮಾಡಬೇಕೆಂದು ತಲೆ ಮೇಲೆ ಕೈ ಇಟ್ಟುಕೊಂಡು ಕುಳಿತಿರುವವರು ಅನೇಕ ಮಂದಿ. ನಿರುದ್ಯೋಗ ಸಮಸ್ಯೆಗಳನ್ನು ಎದುರುತ್ತಿರುವ ಕುಟುಂಬಗಳಿಗೆ ಆರ್ಥಿಕವಾಗಿ ಸಹಾಯವನ್ನು ಸರ್ಕಾರ ಮಾಡಬೇಕಾಗಿದೆ. ದಾನಿಗಳು, ಅನುಕೂಲಸ್ಥರು ಇವರ ಕಷ್ಟಗಳನ್ನು ಅರಿಯಬೇಕಾಗಿದೆ.
ಈ ಸಂದರ್ಭದಲ್ಲಿ ಅನವಶ್ಯಕ ಕಾರ್ಯಕ್ರಮಗಳು, ರಾಜಕೀಯ ಕಾರ್ಯಕ್ರಮಗಳಿಗೆ ನಿಯಂತ್ರಣವಿರಬೇಕು. ತೊಂದರೆಯಲ್ಲಿರುವವರ ಪರಿಸ್ಥಿತಿಯನ್ನು ಅರಿತು ಜೀವನದ ನಿರ್ವಹಣೆಗೆ ಸಂಘ-ಸಂಸ್ಥೆಗಳು ಮುಂದೆ ಬಂದು ಆಹಾರದ ಕಿಟ್‌ಗಳನ್ನು ಒದಗಿಸಿ ಅವರ ಸಂಕಷ್ಟದಲ್ಲಿ ಭಾಗಿಯಾಗಬೇಕಾಗಿದೆ.
-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…