Andolana originals

ಓದುಗರ ಪತ್ರ: ಯುದ್ಧದ ಪರಿಣಾಮದಿಂದ ಜೀವನ ಕಷ್ಟ..ಕಷ್ಟ…

ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸಿಗದೆ ಆಟೋ ಚಾಲಕರ ಜೀವನ ನಿರ್ವಹಣೆ ಕಷ್ಟವಾಗಿದೆ. ದಿನಗಟ್ಟಲೆ ಕಾದರೂ ಜೀವನದ ನಿರ್ವಹಣೆಗೆ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ. ಕೊರೋನ ಸಂದರ್ಭಕ್ಕಿಂತ ಈ ಯುದ್ಧದ ಸಂದರ್ಭ ಸಾರ್ವಜನಿಕರನ್ನು ಕಂಗೆಡಿಸಿದೆ. ಆಟೋ ಚಾಲಕರು, ಕಾರ್ಮಿಕರ ಬದುಕು ಬೀದಿಗೆ ಬಿದ್ದಿದೆ. ಯುದ್ಧದ ಪರಿಣಾಮ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಕೆಲ ಕುಟುಂಬದಲ್ಲಿ ಒಂದು ಹೊತ್ತಿನ ಊಟಕ್ಕೂ ತೊಂದರೆಯಾಗಿದೆ. ಮಕ್ಕಳ ವಿದ್ಯಾಭ್ಯಾಸ, ಜೀವನ ನಿರ್ವಹಣೆಗೆ ಏನು ಮಾಡಬೇಕೆಂದು ತಲೆ ಮೇಲೆ ಕೈ ಇಟ್ಟುಕೊಂಡು ಕುಳಿತಿರುವವರು ಅನೇಕ ಮಂದಿ. ನಿರುದ್ಯೋಗ ಸಮಸ್ಯೆಗಳನ್ನು ಎದುರುತ್ತಿರುವ ಕುಟುಂಬಗಳಿಗೆ ಆರ್ಥಿಕವಾಗಿ ಸಹಾಯವನ್ನು ಸರ್ಕಾರ ಮಾಡಬೇಕಾಗಿದೆ. ದಾನಿಗಳು, ಅನುಕೂಲಸ್ಥರು ಇವರ ಕಷ್ಟಗಳನ್ನು ಅರಿಯಬೇಕಾಗಿದೆ.

ಈ ಸಂದರ್ಭದಲ್ಲಿ ಅನವಶ್ಯಕ ಕಾರ್ಯಕ್ರಮಗಳು, ರಾಜಕೀಯ ಕಾರ್ಯಕ್ರಮಗಳಿಗೆ ನಿಯಂತ್ರಣವಿರಬೇಕು. ತೊಂದರೆಯಲ್ಲಿರುವವರ ಪರಿಸ್ಥಿತಿಯನ್ನು ಅರಿತು ಜೀವನದ ನಿರ್ವಹಣೆಗೆ ಸಂಘ-ಸಂಸ್ಥೆಗಳು ಮುಂದೆ ಬಂದು ಆಹಾರದ ಕಿಟ್‌ಗಳನ್ನು ಒದಗಿಸಿ ಅವರ ಸಂಕಷ್ಟದಲ್ಲಿ ಭಾಗಿಯಾಗಬೇಕಾಗಿದೆ.

-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

16 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

17 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

17 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

18 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

18 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

1 day ago