ಕೆಲವು ದಿನಗಳಿಂದ ಗ್ರಾಮ ಪಂಚಾಯಿತಿ ನೌಕರರು ಹಾಗೂ ಸದಸ್ಯರ ಒಕ್ಕೂಟದವರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಮಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆಯಿಂದಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದ್ದು, ಇದರಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ಸಾಕಾರಗೊಳ ಬೇಕಾದರೆ ಗ್ರಾಮ ಪಂಚಾಯಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಆದರೆ ಇಲ್ಲಿ ಪಂಚಾಯಿತಿಯ ನೌಕರರೇ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿರುವುದು ವಿಪರ್ಯಾಸ. ಆದ್ದರಿಂದ ಸರ್ಕಾರ ಆದಷ್ಟು ಬೇಗ ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳನ್ನು ಈಡೇರಿಸಿ ಅವರು ಎಂದಿನಂತೆ ತಮ್ಮ ಕೆಲಸ ಕಾರ್ಯಗಳಿಗೆ ಹಾಜರಾಗುವಂತೆ ಮಾಡಬೇಕಿದೆ.
-ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಮೈಸೂರು.