Andolana originals

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ ಕ್ಷಣವೂ ಬದುಕಲಾರದ ನಾವು, ಅಹಂಕಾರದ ಭರಾಟೆಯಲ್ಲಿ ಪ್ರಕೃತಿಯನ್ನು ಕಡೆಗಣಿಸುತ್ತಿರುವುದರ ಪರಿಣಾಮವೇ ಇಂದಿನ ಬರಗಾಲದ ಸೂಚನೆ.

ಮತ್ತೊಂದೆಡೆ, ಸಮಾಜದಲ್ಲಿ ಹೆಚ್ಚುತ್ತಿರುವ ಕೊಲೆ, ಸುಲಿಗೆಗಳಂತಹ ಕೃತ್ಯಗಳು ನಮ್ಮ ಆಂತರಿಕ ಮೌಲ್ಯಗಳ ಕುಸಿತಕ್ಕೆ ಸಾಕ್ಷಿಯಾಗಿವೆ. ನಾನೇ ಎಲ್ಲ ಎಂಬ ಭ್ರಮೆ ನಮ್ಮಲ್ಲಿ ಮೂಡಿದಾಗ ಮಾನವೀಯತೆ ನಾಶವಾಗುತ್ತದೆ. ತಂದೆ-ತಾಯಿ, ಗುರುಹಿರಿಯರು ಮತ್ತು ಸಮಾಜವನ್ನು ಗೌರವಿಸುವ ಗುಣ ನಮ್ಮಲ್ಲಿರಬೇಕು. ಪ್ರಕೃತಿಯನ್ನು ನಾವು ಕಾಪಾಡಿದರೆ, ನಾಳೆ ಅದು ನಮ್ಮನ್ನು ಕಾಪಾಡುತ್ತದೆ. ಗಿಡಗಳನ್ನು ನೆಟ್ಟು ಪೋಷಿಸುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಮುಂದಿನ ಪೀಳಿಗೆಗೆ ನಾವು ನೀಡಬೇಕಾದ ಅತಿದೊಡ್ಡ ಆಸ್ತಿ ಹಣವಲ್ಲ, ಬದಲಾಗಿ ಪರಿಸರ ಪ್ರe ಮತ್ತು ಸಂಸ್ಕಾರ. ಈ ಸುಂದರ ಬದುಕಿನಲ್ಲಿ ದ್ವೇಷಕ್ಕೆ ಜಗವಿಲ್ಲ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಾ, ಅಹಂಕಾರವಿಲ್ಲದೆ ಪ್ರೀತಿ ಮತ್ತು ಕೃತಜ್ಞತೆಯಿಂದ ಬದುಕಿದಾಗ ಮಾತ್ರ ನಮಗೆ ನಿಜವಾದ ಶಾಂತಿ ಹಾಗೂ ಸಾರ್ಥಕತೆ ಲಭಿಸಲು ಸಾಧ್ಯ.

– ಬಿ. ಗಣೇಶ , ಮೈಸೂರು

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

11 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

12 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

12 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

13 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

15 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

21 hours ago