ಮಹಾರಾಷ್ಟ್ರದಲ್ಲಿ ಇನ್ನು ಮುಂದೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಮರಾಠಿ ಭಾಷೆಯಲ್ಲಿಯೇ ಮಾತನಾಡಬೇಕು ಎಂಬ ಆದೇಶ ಜಾರಿಗೆ ತಂದಿದ್ದು, ನಿಯಮವನ್ನು ಉಲ್ಲಂಸಿದವರ ವಿರುದ್ಧ ಶಿಸ್ತು ಕ್ರಮ ಜರು ಗಿಸುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಈ ಆದೇಶವನ್ನು ರಾಜ್ಯಾದ್ಯಂತ ಸ್ವಾಗತಿಸಲಾಗಿದೆ. ಕರ್ನಾಟಕದಲ್ಲಿ ಇಂಗ್ಲಿಷ್ ವ್ಯಾಮೋಹವಿರುವಂತೆ ಮಹಾರಾಷ್ಟ್ರದಲ್ಲಿಯೂ ಹಿಂದಿ ಭಾಷೆಯ ದಬ್ಬಾಳಿಕೆ ಹೆಚ್ಚಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಅಲ್ಲಿನ ಸರ್ಕಾರ ಎಲ್ಲ ಸರ್ಕಾರಿ ಕಚೇರಿಗಳಲ್ಲಿಯೂ ಮರಾಠಿ ಭಾಷೆ ಮಾತನಾಡಬೇಕು ಎಂಬ ನಿಯಮವನ್ನು ಜಾರಿಗೆ ತಂದಿದೆ. ಕರ್ನಾಟಕದಲ್ಲಿ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಸರೋಜಿನಿ ಮಹಿಷಿ ವರದಿ ಜಾರಿಯಾಗಿಲ್ಲ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಸೂದೆ ಮಂಡನೆಗಾಗಿ ಕಾಯುತ್ತಿರುವಾಗ, ಮಹಾರಾಷ್ಟ್ರ ಸರ್ಕಾರ ಸದ್ದಿಲ್ಲದೇ ಮರಾಠಿ ಭಾಷೆಯ ಪರವಾಗಿ ನಿಂತಿರುವುದು ಕರ್ನಾಟಕ ಸರ್ಕಾರದ ಕಣ್ಣು ತೆರೆಸಬೇಕು. ರಾಜ್ಯ ಸರ್ಕಾರ ಭಾಷಾ ವಿಷಯದಲ್ಲಿ ಮಹಾರಾಷ್ಟ್ರದ ಕ್ರಮವನ್ನು ಪಾಲಿಸಬೇಕು. ಬಹುಶಃ ಮುಂದಿನ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಸ್ಥಳಗಳಲ್ಲೂ ಮರಾಠಿ ಭಾಷೆಯಲ್ಲಿಯೇ ಮಾತನಾಡಬೇಕು ಎಂಬ ನಿಯಮ ಜಾರಿಗೆ ಬರುವ ದಿನಗಳು ದೂರವಿಲ್ಲ ಅನಿಸುತ್ತದೆ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.





