Mysore
27
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಓದುಗರ ಪತ್ರ| ಪುಸ್ತಕಗಳನ್ನು ಸರಿಯಾಗಿ ನಿರ್ವಹಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ರುವ ಗ್ರಂಥಾಲಯದಲ್ಲಿ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಪುಸ್ತಕಗಳು ಹಾಳಾಗುತ್ತಿವೆ.

ಈ ಗ್ರಂಥಾಲಯದಲ್ಲಿ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಪುಸ್ತಕಗಳಿವೆ. ಆದರೆ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಅವು ವಿದ್ಯಾರ್ಥಿಗಳಿಗೆ ಸರಿಯಾಗಿ ಲಭ್ಯವಾಗುತ್ತಿಲ್ಲ. ಇಲ್ಲಿನ ಎಲ್ಲ ಪುಸ್ತಕಗಳಿಗೂ ಬಾರ್‌ಕೊಡ್‌ಗಳನ್ನು ನೀಡಲಾಗಿದ್ದು, ಅವುಗಳನ್ನು ಸರಿಯಾಗಿ ನಿರ್ವಹಿಸಲು ಇಲ್ಲಿನ ಸಿಬ್ಬಂದಿ ವಿಫಲರಾಗಿದ್ದಾರೆ. ಇದರಿಂದಾಗಿ ಪುಸ್ತಕಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಹರಿದುಹೋಗುತ್ತಿವೆ. ಅಲ್ಲದೆ ಭಾನುವಾರದಂದು ಇಲ್ಲಿನ ಸಿಬ್ಬಂದಿ ಓದುಗ ರೊಂದಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಪುಸ್ತಕಗಳನ್ನು ಕ್ರಮವಾಗಿ ಜೋಡಿಸಿಡುವ ಜತೆಗೆ ಓದುಗ ರೊಂದಿಗೆ ಸರಿಯಾಗಿ ಸ್ಪಂದಿಸುವಂತೆ ಇಲ್ಲಿನ ಸಿಬ್ಬಂದಿಗೆ ಸೂಚನೆ ನೀಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

Tags:
error: Content is protected !!