ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ರುವ ಗ್ರಂಥಾಲಯದಲ್ಲಿ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಪುಸ್ತಕಗಳು ಹಾಳಾಗುತ್ತಿವೆ.
ಈ ಗ್ರಂಥಾಲಯದಲ್ಲಿ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಪುಸ್ತಕಗಳಿವೆ. ಆದರೆ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಅವು ವಿದ್ಯಾರ್ಥಿಗಳಿಗೆ ಸರಿಯಾಗಿ ಲಭ್ಯವಾಗುತ್ತಿಲ್ಲ. ಇಲ್ಲಿನ ಎಲ್ಲ ಪುಸ್ತಕಗಳಿಗೂ ಬಾರ್‌ಕೊಡ್‌ಗಳನ್ನು ನೀಡಲಾಗಿದ್ದು, ಅವುಗಳನ್ನು ಸರಿಯಾಗಿ ನಿರ್ವಹಿಸಲು ಇಲ್ಲಿನ ಸಿಬ್ಬಂದಿ ವಿಫಲರಾಗಿದ್ದಾರೆ. ಇದರಿಂದಾಗಿ ಪುಸ್ತಕಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಹರಿದುಹೋಗುತ್ತಿವೆ. ಅಲ್ಲದೆ ಭಾನುವಾರದಂದು ಇಲ್ಲಿನ ಸಿಬ್ಬಂದಿ ಓದುಗ ರೊಂದಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಪುಸ್ತಕಗಳನ್ನು ಕ್ರಮವಾಗಿ ಜೋಡಿಸಿಡುವ ಜತೆಗೆ ಓದುಗ ರೊಂದಿಗೆ ಸರಿಯಾಗಿ ಸ್ಪಂದಿಸುವಂತೆ ಇಲ್ಲಿನ ಸಿಬ್ಬಂದಿಗೆ ಸೂಚನೆ ನೀಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…