Mysore
25
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

ಓದುಗರ ಪತ್ರ:  ಉಗನಿಯಲ್ಲಿ ಸ್ವಚ್ಛತೆ ಕಾಪಾಡಿ

ಓದುಗರ ಪತ್ರ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಧನಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಗನಿಯ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ಕೊಳಚೆ ನೀರು ಎಲ್ಲೆಂದರಲ್ಲಿ ನಿಂತಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ.

ಚರಂಡಿಗಳನ್ನು ನಿರ್ಮಿಸುವ ಮೂಲಕ ಸ್ವಚ್ಛತೆ ಕಾಪಾಡುವಂತೆ ಗ್ರಾಮಸ್ಥರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರ ಅಧಿಕಾರಾವಧಿ ಮುಗಿದಿರುವುದರಿಂದ ಗ್ರಾಪಂ ಅಧಿಕಾರಿಗಳೇ ಆಡಳಿತ ನಡೆಸುತ್ತಿದ್ದು, ಗ್ರಾಮದಲ್ಲಿ ಸ್ವಚ್ಛತಾ ಕಾರ್ಯವನ್ನು ನಿರ್ಲಕ್ಷಿಸಿದ್ದಾರೆ. ಸಂಬಂಧಪಟ್ಟವರು ಈಗಲಾದರೂ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಮೂಲಕ ಅನುಕೂಲ ಕಲ್ಪಿಸಬೇಕಾಗಿದೆ.

 -ಮಾದೇಶ್ ಎಂ. ಉಗನಿಯ, ಕೊಳ್ಳೇಗಾಲ ತಾ.

Tags:
error: Content is protected !!