ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ದೇಶವು ಹಲವಾರು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿ ಮಂಚೂಣಿಗೆ ಬರುತ್ತಿದೆ. ಬಸ್ಸು, ಕಾರು, ಲಾರಿ, ಆಟೋ, ದ್ವಿಚಕ್ರ ವಾಹನಗಳು ಸೇರಿ ಮತ್ತಿತರ ವಾಹನಗಳಿಗೆ ಪೆಟ್ರೋಲ್,ಡೀಸೆಲ್ ಬಳಸಿ ಚಾಲನೆ ಮಾಡುತ್ತಿದ್ದ ಸಮಯದಲ್ಲಿ ಇತ್ತೀಚೆಗೆ ವಿದ್ಯುತ್ ಚಾಲಿತ ವಾಹನಗಳು ದೇಶದಲ್ಲಿ ಚಾಲ್ತಿಗೆ ಬಂದಿವೆ. ಅದರಲ್ಲೂ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳನ್ನು ವಿದ್ಯಾರ್ಥಿಗಳು, ಅಪ್ರಾಪ್ತರು, ಯುವಕ – ಯುವತಿಯರು, ಕೆಲ ಮಹಿಳೆಯರು, ಪುರುಷರು ಸಂಚಾರ ನಿಯಮ ಗಳನ್ನು ಪಾಲಿಸದೆ, ಹೆಲ್ಮೆಟ್ ಧರಿಸದೆ ಅಡ್ಡಾದಿಡ್ಡಿ ಚಾಲನೆ ಮಾಡುತ್ತಿ ರುವುದು ಕಂಡುಬರುತ್ತಿದೆ. ಇದರಿಂದ ಇತರ ವಾಹನ ಸವಾರರಿಗೂ ತೊಂದರೆಯಾಗುತ್ತಿದೆ. ಆದ್ದರಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುವವರಿಗೂ ಹೆಲ್ಮೆಟ್ ಕಡ್ಡಾಯಗೊಳಿಸಬೇಕು.
ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಅಪ್ರಾಪ್ತರೂ ಚಾಲನೆ ಮಾಡುತ್ತಿರುವುದರಿಂದ ಸಣ್ಣ ವಯಸ್ಸಿನವರ ಅಪಘಾತ, ಸಾವು ನೋವುಗಳನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ , ಮೈಸೂರು
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…