Mysore
22
clear sky

Social Media

ಬುಧವಾರ, 01 ಏಪ್ರಿಲ 2026
Light
Dark

ಓದುಗರ ಪತ್ರ: ಕನ್ನಡ ಭಾಷೆ ಕಲಿಕೆ ಕಡ್ಡಾಯವಾಗಲಿ

ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಯನ್ನು ಅಂಕದಿಂದ ಬಿಟ್ಟು ಗ್ರೇಡ್‌ಗೆ ಮಾತ್ರ ಮಾನ್ಯ ಮಾಡಿದೆ. ಇದರಿಂದ ವಿದ್ಯಾರ್ಥಿಗಳು ಯಾವ ಭಾಷೆಯನ್ನು ತೃತೀಯ ಭಾಷೆಯಾಗಿ ಓದುತ್ತಾರೋ ಅವರಿಗೆ ಅನುಕೂಲವಾಗಿದೆ. ಆದರೆ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ರಾಜ್ಯದಲ್ಲಿ ಕನ್ನಡವನ್ನೇ ತೃತೀಯ ಭಾಷೆಯಾಗಿ ಓದುವುದರಿಂದ ಕನ್ನಡಕ್ಕೂ ಹೆಚ್ಚಿನ ನಷ್ಟವಾಗಿದೆ. ಆದ್ದರಿಂದ ಸರ್ಕಾರ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯವಾಗಿ ಕಲಿಯುವಂತೆ ದ್ವಿಭಾಷಾ ನೀತಿಯನ್ನು ಜಾರಿಗೆ ತಂದು ಕನ್ನಡವನ್ನು ಕಡ್ಡಾಯವಾಗಿ ಕಲಿಯುವಂತೆ ಶಿಕ್ಷಣ ನೀತಿಯನ್ನು ಜಾರಿ ಮಾಡಬೇಕು. ಆಗ ಮಾತ್ರ ಕನ್ನಡದ ಉಳಿವು ಸಾಧ್ಯ.

ಶಿಕ್ಷಕರೂ ಸೇರಿದಂತೆ ಅನೇಕ ಜನರು ಹಿಂದಿಯನ್ನು ರಾಷ್ಟ್ರಭಾಷೆ ಎಂದು ತಪ್ಪಾಗಿ ತಿಳಿದಿದ್ದಾರೆ ; ಹಿಂದಿ ರಾಷ್ಟ್ರಭಾಷೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ. ಹಿಂದಿ ಕೂಡ ಕನ್ನಡದಂತೆ ಸಂವಿಧಾನದಲ್ಲಿ ಮಾನ್ಯತೆ ಪಡೆದ ೨೨ ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ ಅಷ್ಟೆ.

ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

 

Tags:
error: Content is protected !!