ಇಂದು ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಪುರುಷರಿಗೆ ಸರಿಸಮನಾಗಿ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ.
ಮಹಿಳೆಯರು ಒಂದು ಊರಿನಿಂದ ಇನ್ನೊಂದು ಊರಿಗೆ ಪ್ರಯಾಣ ಮಾಡುವ ಸಂದರ್ಭದಲ್ಲಿ ನೈಸರ್ಗಿಕ ಸಹಜ ಕ್ರಿಯೆಯಾಗಿರುವ ಋತುಚಕ್ರ ಎದುರಾದರೆ ಕೆಲವರು ಶುಚಿ ಪ್ಯಾಡ್ ಇಲ್ಲದೇ ಪರದಾಡು ವಂತಾಗುತ್ತದೆ.
ತಕ್ಷಣಕ್ಕೆ ಹತ್ತಿರದಲ್ಲಿ ಯಾವುದೋ ಮೆಡಿಕಲ್ ಸ್ಟೋರ್‌ಗಳಾಗಲಿ, ಅಂಗಡಿಗಳಾಗಿ ಸಿಗುವುದಿಲ್ಲ ಇದರಿಂದ ಹೆಣ್ಣು ಮಕ್ಕಳು ಸಾರ್ವಜನಿಕವಾಗಿ ಮುಜುಗರಕ್ಕೊಳಗಾಗಿ, ಭಯಭೀತರಾಗುತ್ತಾರೆ. ಆದ್ದರಿಂದ ಮಹಿಳೆಯರು ಮತ್ತು ಹೆಣ್ಣು ಮಕ್ಕಳು ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಸಾರ್ವಜನಿಕ ಶೌಚಾಲಯಗಳು ಸೇರಿದಂತೆ ಬಸ್ಸು ಹಾಗೂ ರೈಲಿನಲ್ಲೂ ಕಡ್ಡಾಯವಾಗಿ ಪ್ರಥಮ ಚಿಕಿತ್ಸೆ ಪೆಟ್ಟಿಗೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆರೋಗ್ಯ ಇಲಾಖೆ ವತಿಯಿಂದ ಉಚಿತ ಶುಚಿ ಪ್ಯಾಡ್ ಗಳು ದೊರೆಯುವಂತೆ ವ್ಯವಸ್ಥೆ ಮಾಡಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು





