Andolana originals

ಓದುಗರ ಪತ್ರ:  ಎಸ್‌ಯುಪಿಡಬ್ಲ್ಯು ಕಡ್ಡಾಯವಾಗಲಿ

ಇತ್ತೀಚೆಗೆ ಅನೇಕ ಶಾಲೆಗಳು ಶಿಕ್ಷಣದ ನಿಜವಾದ ಅರ್ಥವನ್ನು ಸಂಪೂರ್ಣ ಮರೆತಿವೆ. ಎಸ್‌ಯುಪಿಡಬ್ಲ್ಯು (ಸಾಮಾಜಿಕವಾಗಿ ಉಪಯುಕ್ತ ಉತ್ಪಾದಕ ಕೆಲಸ) ಮತ್ತು ಕ್ರೀಡಾ ಚಟುವಟಿಕೆಗಳು ಪಠ್ಯಕ್ರಮದ ಅವಿಭಾಜ್ಯ ಭಾಗವಾಗಿದ್ದರೂ, ಬಹುತೇಕ ಶಾಲೆಗಳು ಇವುಗಳನ್ನು ಕೇವಲ ‘ಔಪಚಾರಿಕ’ದಂತೆ ನೋಡುತ್ತಿವೆ ಎಂಬ ವರದಿ ನೋವುಂಟು ಮಾಡುತ್ತದೆ. ಮಕ್ಕಳಿಗೆ ಕೇವಲ ಪುಸ್ತಕದ ಜ್ಞಾನ ತುಂಬಿ ಪರೀಕ್ಷಾ ಅಂಕಗಳ ಹಿಂದೆ ಓಡಿಸುವುದು ಸರಿಯಲ್ಲ. ಎಸ್‌ಯುಪಿ ಡಬ್ಲ್ಯು ಮೂಲಕ ಮಕ್ಕಳಲ್ಲಿ ಶ್ರಮದ ಘನತೆ, ಕೌಶಲ ಮತ್ತು ಸ್ವಾವಲಂಬನೆ ಬೆಳೆಸಬೇಕು.

ಮಕ್ಕಳಿಗೆ ದಿನವೂ ಕನಿಷ್ಠ ಅರ್ಧಗಂಟೆ ಆಟದ ಸಮಯ ನೀಡಲು ಶಾಲೆಗಳು ಮುಂದಾಗುತ್ತಿಲ್ಲ. ಪಾಠದ ಒತ್ತಡದಲ್ಲಿ ಮಕ್ಕಳು ಉಸಿರಾಡಲಾಗದ ಸ್ಥಿತಿಗೆ ತಲುಪಿದ್ದಾರೆ. ಇಂತಹ ಶಿಕ್ಷಣದಿಂದ ಅವರ ಆರೋಗ್ಯವೂಹಾಳಾಗುತ್ತದೆ. ಶಿಕ್ಷಣ ಇಲಾಖೆ ಇಂತಹ ಶಾಲೆಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಎಸ್‌ಯು ಪಿ ಡಬ್ಲ್ಯು ಮತ್ತು ಕ್ರೀಡಾ ಚಟುವಟಿಕೆಗಳನ್ನು ಕಡ್ಡಾಯಗೊಳಿಸುವ ಕಾನೂನು ತರಬೇಕು. ಇಲ್ಲವಾದರೆ ಮುಂದಿನ ಪೀಳಿಗೆಯ ದೈಹಿಕ ಹಾಗೂ ಕ್ಷೀಣಿಸುತ್ತದೆ.

ನಿಜವಾದ ಶಿಕ್ಷಣ ಎಂದರೆ ಜೀವನಕ್ಕೆ ತಯಾರು ಮಾಡುವುದು. ಪರೀಕ್ಷೆಗಲ್ಲ. ಇದನ್ನು ಮರೆಯುತ್ತಿರುವ ಶಾಲೆಗಳ ವಿರುದ್ಧ ಶಿಕ್ಷಣ ಇಲಾಖೆ ಕಠಿಣಕ್ರಮ ಕೈಗೊಳ್ಳುವುದು ಅಗತ್ಯ.

-ಡಾ. ಎಚ್. ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

7 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

12 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

13 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

14 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

15 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

20 hours ago