ಓದುಗರ ಪತ್ರ
ಮೈಸೂರು ನಗರದ ೫೬ನೇ ವಾರ್ಡಿನ ಅಶೋಕಪುರಂನಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಬಸ್ ತಂಗುದಾಣವನ್ನು ನಿರ್ಮಿಸಲಾಗಿತ್ತು. ಹೀಗಾಗಿ ಬಸ್‌ಗಾಗಿ ಕಾದು ನಿಲ್ಲುವ ಪ್ರಯಾಣಿಕರಿಗೆ ಬಿಸಿಲು, ಮಳೆಯಿಂದ ರಕ್ಷಣೆ ಸಿಗುತ್ತಿತ್ತು. ಈಗ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್‌ಗಳ ಓಡಾಟವನ್ನೂ ನಿಲ್ಲಿಸಲಾಗಿದೆ.
ಹೀಗಾಗಿ ಈ ಬಸ್ ತಂಗುದಾಣದಿಂದ ಸಾರ್ವಜನಿಕರಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲ . ಇದರಿಂದ ಸದರಿ ಬಸ್ ನಿಲ್ದಾಣ ಪ್ರಸ್ತುತ ಭಿಕ್ಷೆ ಬೇಡುವವರು ಮತ್ತು ಹಸು, ಕುರಿ, ಕೋಳಿಗಳ ತಂಗುದಾಣವಾಗಿ ಮಾರ್ಪಟ್ಟಿದೆ. ಈ ಸಂಬಂಧ ಕೆಎಸ್ಆರ್‌ಟಿಸಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ಸಿಗುತ್ತಿಲ್ಲ.
ಸಂಬಂಧಪಟ್ಟವರು ಈ ಮಾರ್ಗದಲ್ಲಿ ಬಸ್‌ಗಳ ಸಂಚಾರವನ್ನು ಪುನಾರಂಭಿಸಿ ಜನರು ಅನಾಥವಾಗಿರುವ ಈ ಬಸ್ ನಿಲ್ದಾಣದ ಪ್ರಯೋಜನ ಪಡೆಯುವಂತೆ ಮಾಡಲು ಕ್ರಮವಹಿಸಬೇಕಿದೆ.
– ಸಿ.ಶಿವಣ್ಣ , ಪ್ರಧಾನ ಕಾರ್ಯದರ್ಶಿ, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘ
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…
ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…
ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್…
ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.11ರಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ…