ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ‘ಉದಯರವಿ’ ಮನೆಯನ್ನು ಸ್ಮಾರಕವನ್ನಾಗಿ ಮಾಡಬೇಕೆಂದು ಸಾಹಿತ್ಯಾಸಕ್ತರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಂಡಿಲ್ಲ.
ಈ ಹಿನ್ನೆಲೆಯಲ್ಲಿ ಕುವೆಂಪು ಅವರ ಅಳಿಯ, ಕುವೆಂಪು ವಿವಿ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ ಅವರು ಮನೆಯನ್ನು ಸ್ಮಾರಕವನ್ನಾಗಿ ರೂಪಿಸುತ್ತೇವೆ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಕುವೆಂಪು ಅವರು ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯವನ್ನು ಬರೆದ ಉದಯರವಿ ಮನೆಯನ್ನು ಸರ್ಕಾರ ಕೂಡಲೇ ಸ್ಮಾರಕವನ್ನಾಗಿ ರೂಪಿಸಬೇಕು ಹಾಗೂ ಕುಪ್ಪಳ್ಳಿಯ ಮನೆಯಂತೆ ಉದಯರವಿಯನ್ನೂ ಪ್ರವಾಸಿ ತಾಣವಾಗಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ



