Mysore
22
broken clouds
Light
Dark

ಓದುಗರ ಪತ್ರ: ಚರಂಡಿ ತ್ಯಾಜ್ಯ ತೆರವುಗೊಳಿಸಲು ಮನವಿ

ಮಂಡ್ಯ ಸ್ವಚ್ಛ ನಗರ ಎಂದು ಹೇಳುತ್ತಾರೆ. ಆದರೆ ಇಲ್ಲಿನ ಚಾಮುಂಡೇಶ್ವರಿ ನಗರದ ೯ನೇ ತಿರುವಿನ ರಸ್ತೆ ಬದಿಯಲ್ಲಿರುವ ಚರಂಡಿಯಲ್ಲಿ ತ್ಯಾಜ್ಯ ತುಂಬಿಕೊಂಡು ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ಹರಿಯುವಂತಾಗಿದೆ. ಈ ಚರಂಡಿಯಲ್ಲಿ ತ್ಯಾಜ್ಯ ತುಂಬಿಕೊಂಡು ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳಾದ ಕಾಲರಾ, ಡೆಂಗ್ಯು, ಚಿಕೂನ್ ಗುನ್ಯಾ ಹರಡುವ ಭೀತಿ ಎದುರಾಗಿದೆ. ಇಲ್ಲಿನ ನಾಗರಿಕರು ಸೊಳ್ಳೆಗಳ ಕಾಟದಿಂದ ಪರಿತಪಿಸುವಂತಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳದ ನಗರಸಭೆಯ ಅಽಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಸಂಬಂಽಸಿದ ಅಽಕಾರಿಗಳು ಈ ಬಗ್ಗೆ ಕ್ರಮ ವಹಿಸಿ, ಚರಂಡಿ ತ್ಯಾಜ್ಯವನ್ನು ತೆರವುಗೊಳಿಸಬೇಕು. -ಸಿ. ಸಿದ್ದರಾಜು ಆಲಕೆರೆ, ಮಂಡ್ಯ.