ಓದುಗರ ಪತ್ರ
ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಸೆ.೨೨ ರಿಂದ ಆರಂಭವಾಗಿದ್ದು, ಅಕ್ಟೋಬರ್ ೨ ರವರೆಗೆ ಅದ್ಧೂರಿಯಾಗಿ ಜರುಗಲಿದೆ. ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ ಸುಮಾರು ೬೦ ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಆದರೆ ಅನೇಕ ಜನಾಕರ್ಷಣೀಯ ಮತ್ತು ಮನರಂಜನಾ ಕಾರ್ಯಕ್ರಮಗಳ ಪ್ರವೇಶ ಶುಲ್ಕ ದುಬಾರಿಯಾಗಿರುವುದು ಜನರಲ್ಲಿ ಬೇಸರ ತರಿಸಿದೆ. ಈ ಬಾರಿಯೂ ಯುವ ದಸರಾ ವೀಕ್ಷಣೆಗೆ ದರ ನಿಗದಿ ಮಾಡಿದ್ದು, ಟಿಕೆಟ್ ವ್ಯವಸ್ಥೆಯನ್ನು ಮಾಡಲಾಗಿದೆ.
ಒಟ್ಟಾರೆ ೨೦ ಸಾವಿರ ಆಸನಗಳ ವ್ಯವಸ್ಥೆ ಮಾಡಿದ್ದು, ಈ ಪೈಕಿ ೫ ಸಾವಿರ ರೂ. ಟಿಕೆಟ್ ಹಾಗೂ ೨,೫೦೦ ರೂ. ಟಿಕೆಟ್‌ಗಳಿಗೆ ರೂ.೫೦೦ ಆಸನಗಳ ಗ್ಯಾಲರಿಗಳಲ್ಲಿ ಸ್ಥಳ ವ್ಯವಸ್ಥೆಗೊಳಿಸಲಾಗಿದೆ. ಇದಲ್ಲದೆ ಅಂಬಾರಿ ಬಸ್ ಪ್ರಯಾಣ ದರ ರೂ. ೫೦೦, ದಸರಾ ಗೋಲ್ಡ್ ಕಾರ್ಡ್‌ಗೆ ರೂ. ೬,೫೦೦. ಜಂಬೂಸವಾರಿ ವೀಕ್ಷಣೆಗೆ ರೂ.೩,೫೦೦. ಪಂಜಿನ ಕವಾಯತು ವೀಕ್ಷಣೆ ರೂ.೧೫೦೦. ಡ್ರೋನ್ ಶೋಗೆ ರೂ. ೧೫೦೦. ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ರೂ. ೫೦ ನಿಗದಿ ಮಾಡಲಾಗಿದ್ದು ಈ ಬಾರಿಯೂ ದಸರಾ ವೀಕ್ಷಣೆಯು ತುಂಬಾ ದುಬಾರಿಯಾಗಿದೆ ಎಂದು ಜನ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ರಾಜಕೀಯ ಮುಖಂಡರ ಹಿಂಬಾಲಕರಿಗೆ ಮಾತ್ರ ಉಚಿತ ಪಾಸ್‌ಗಳು ದೊರಕುತ್ತಿದ್ದು, ಸಾಮಾನ್ಯ ಜನರಿಗೆ ದಸರಾ ವೀಕ್ಷಣೆ ಅಸಾಧ್ಯವಾಗಿದೆ.
ನಾಡಿನ ವಿವಿಧ ಮೂಲೆಗಳಿಂದ ಆಗಮಿಸುವ ಪ್ರವಾಸಿಗರ ಜೇಬಿಗೆ ಕತ್ತರಿ ಬೀಳುವುದು ಗ್ಯಾರಂಟಿಯಾಗಿದೆ. ಈಗಾಗಲೇ ಟಿಕೆಟ್ ದರದ ಹೆಚ್ಚಳದ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ದಸರಾ ನಡೆಸುವುದು ದುಡ್ಡಿಗಾಗಿಯೇ ಎಂಬ ಮನೋಭಾವನೆ ಸಾರ್ವಜನಿಕರಲ್ಲಿ ಮನೆ ಮಾಡುತ್ತಿದೆ. ಆದ್ದರಿಂದ ಈ ಬಾರಿಯ ದಸರಾವು ದುಬಾರಿಯಾಗದೆ ಜನಸಾಮಾನ್ಯರ ದಸರಾವಾಗಲಿ ಎಂಬುದೇ ಸಾರ್ವಜನಿಕರ ಒಕ್ಕೊರಲಿನ ಅಭಿಪ್ರಾಯವಾಗಿದೆ.
-ಪರಶಿವಮೂರ್ತಿ ಎನ್.ಪಿ, ನಂಜೀಪುರ, ಸರಗೂರು ತಾ
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…