Mysore
31
scattered clouds

Social Media

ಭಾನುವಾರ, 01 ಮಾರ್ಚ್ 2026
Light
Dark

ಓದುಗರ ಪತ್ರ| ಭಾರತ ಹೆಚ್ಚು ಪದಕಗಳನ್ನು ಗೆದ್ದು ಬರಲಿ

ಪ್ಯಾರಿಸ್‌ನಲ್ಲಿ ನಡೆಯುತ್ತಿರುವ 33ನೇ ಆವೃತ್ತಿಯ ಒಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಶುಭಾರಂಭ ಮಾಡಿದ್ದು, ಹಾಕಿ ತಂಡ ನ್ಯೂಜಿಲ್ಯಾಂಡ್ ವಿರುದ್ಧ ತನ್ನ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ್ದರೆ, ಪಿಸ್ತೂಲ್ ಶೂಟಿಂಗ್ ವಿಭಾಗದಲ್ಲಿ ಭಾರತದ ಮನು ಭಾಕರ್ ಪದಕ ಗೆದ್ದಿದ್ದಾರೆ.

ಈ ಕ್ರೀಡಾಕೂಟದಲ್ಲಿ ಭಾರತದ 117 ಕ್ರೀಡಾಪಟುಗಳು ಭಾಗವಹಿಸುತ್ತಿ ದ್ದಾರೆ. ಕಳೆದ ಆವೃತ್ತಿಯಲ್ಲಿ ಭಾರತದ ಕ್ರೀಡಾಪಟುಗಳು 7 ಪದಕಗಳನ್ನು ಗೆಲ್ಲುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಆವೃತ್ತಿಯಲ್ಲಿ ಅದಕ್ಕಿಂತಲೂ ಅಧಿಕ ಪದಕಗಳನ್ನು ಗೆದ್ದು ಬರಲಿ ಎಂಬುದು ಭಾರತೀಯರ ಆಶಯ. ಭಾರತ ಇತ್ತೀಚಿನ ವರ್ಷಗಳಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಕ್ರೀಡಾಪಟುಗಳಿಗೆ ದೇಶದಲ್ಲಿ ಪೂರಕ ವಾತಾವರಣ ನಿರ್ಮಿಸಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿರುವ ಪರಿಣಾಮ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು ಸಾಧನೆ ಮಾಡುತ್ತಿದ್ದಾರೆ. ಕಳೆದ ಬಾರಿ ಪದಕ ವಿಜೇತರಾದ ಕ್ರೀಡಾಪಟುಗಳೂ ಈ ಬಾರಿಯ ಒಲಿಂಪಿಕ್ಸ್ ಕ್ರೀಡಾ ಕೂಟದಲ್ಲಿ ಭಾಗಿಯಾಗುತ್ತಿದ್ದು, ಹಿರಿಯ ಆಟಗಾರರ ಸ್ಫೂರ್ತಿಯೊಂದಿಗೆ ಇತರೆ ಆಟಗಾರರೂ ಭಾಗವಹಿಸಿ ಎಲ್ಲ ಕ್ರೀಡೆಗಳಲ್ಲಿಯೂ ಪದಕಗಳನ್ನು ಗೆದ್ದು ಬರಲಿ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

Tags:
error: Content is protected !!